ರಾಜ್ಯ

ಹನಿಟ್ರ್ಯಾಪ್‌ ಹಿಂದಿರುವವರ ಹೆಸರ ಹೊರಬರಬೇಕು: ಸತೀಶ್‌ ಜಾರಕಿಹೊಳಿ

ಬೆಳಗಾವಿ: ಕೆಎನ್‌ ರಾಜಣ್ಣ ಅವರ ಹನಿಟ್ರ್ಯಾಪ್‌ ಪ್ರಕರಣದ ಹಿಂದೆ ಯಾರಿದ್ದಾರೆ ಅವರ ಹೆಸರು ಹೊರಗಡೆ ಬರಲೇಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಗಾಗ ಸಿಡಿ ಸದ್ದು ಆಗುತ್ತಿರುತ್ತದೆ. ಆದರೆ, ಯಾವುದೇ ತನಿಖೆಯೂ ತಾರ್ಕಿಕವಾಗಿ ಅಂತ್ಯವಾಗಿಲ್ಲ. ಸರಿಯಾದ ರೀತಿಯಲ್ಲಿ ತನಿಖೆಯಾಗಬೇಕು ಎಂದರು.

ಸಹೋದರ ರಮೇಶ ಜಾರಕಿಹೊಳಿ ಪ್ರಕರಣದಲ್ಲಿ ಹೀಗೆ ಆಯ್ತು. ತನಿಖೆ ಆಯಿತು, ಆದರೆ ಮಾಡಿದವರು ಯಾರು ಅಂತ ಆಚೆ ಬರಲಿಲ್ಲ ಎಂದು ತಿಳಿಸಿದರು.

ದೂರು ನೀಡಿದರೆ ಗೃಹ ಸಚಿವರು ತನಿಖೆ ಮಾಡುವುದಾಗಿ ಹೇಳಿದ್ದಾರೆ. ರಾಜಕಾರಣಿಗಳ ಹೆಸರಿನಲ್ಲಿ ಈ ರೀತಿಯ ಕೆಲಸ ಬೇಡ. ಬೇಕಾದರೆ ಹೋರಾಟ ಮಾಡಿ ಆದರೆ ಇಂತ ಹೀನ ಕೃತ್ಯ ಮಾಡಿಸಿ ಬಲಿಪಶು ಮಾಡಿಸಬೇಡಿ ಎಂದರು.

ಈ ಗಂಭಿರ ಸಮಸ್ಯೆಯಲ್ಲಿ ಸ್ವಪಕ್ಷೀಯದವರೇ ಇರಬಹುದು ಅಥವಾ ಬೇರೆ ಪಕ್ಷದವರೇ ಇರಬಹುದು. ಕಾಂಗ್ರೆಸ್‌ ಹೈಕಮಾಂಡ್‌ ಈ ವಿಚಾರಾವಾಗಿ ವರದಿ ತರಿಸಿಕೊಂಡು ತನಿಖೆ ನಡೆಸಲು ಸಮ್ಮತಿ ನೀಡಬೇಕು ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

10 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

10 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

11 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

12 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

12 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

12 hours ago