ಬೆಳಗಾವಿ: ಕೆಎನ್ ರಾಜಣ್ಣ ಅವರ ಹನಿಟ್ರ್ಯಾಪ್ ಪ್ರಕರಣದ ಹಿಂದೆ ಯಾರಿದ್ದಾರೆ ಅವರ ಹೆಸರು ಹೊರಗಡೆ ಬರಲೇಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಗಾಗ ಸಿಡಿ ಸದ್ದು ಆಗುತ್ತಿರುತ್ತದೆ. ಆದರೆ, ಯಾವುದೇ ತನಿಖೆಯೂ ತಾರ್ಕಿಕವಾಗಿ ಅಂತ್ಯವಾಗಿಲ್ಲ. ಸರಿಯಾದ ರೀತಿಯಲ್ಲಿ ತನಿಖೆಯಾಗಬೇಕು ಎಂದರು.
ಸಹೋದರ ರಮೇಶ ಜಾರಕಿಹೊಳಿ ಪ್ರಕರಣದಲ್ಲಿ ಹೀಗೆ ಆಯ್ತು. ತನಿಖೆ ಆಯಿತು, ಆದರೆ ಮಾಡಿದವರು ಯಾರು ಅಂತ ಆಚೆ ಬರಲಿಲ್ಲ ಎಂದು ತಿಳಿಸಿದರು.
ದೂರು ನೀಡಿದರೆ ಗೃಹ ಸಚಿವರು ತನಿಖೆ ಮಾಡುವುದಾಗಿ ಹೇಳಿದ್ದಾರೆ. ರಾಜಕಾರಣಿಗಳ ಹೆಸರಿನಲ್ಲಿ ಈ ರೀತಿಯ ಕೆಲಸ ಬೇಡ. ಬೇಕಾದರೆ ಹೋರಾಟ ಮಾಡಿ ಆದರೆ ಇಂತ ಹೀನ ಕೃತ್ಯ ಮಾಡಿಸಿ ಬಲಿಪಶು ಮಾಡಿಸಬೇಡಿ ಎಂದರು.
ಈ ಗಂಭಿರ ಸಮಸ್ಯೆಯಲ್ಲಿ ಸ್ವಪಕ್ಷೀಯದವರೇ ಇರಬಹುದು ಅಥವಾ ಬೇರೆ ಪಕ್ಷದವರೇ ಇರಬಹುದು. ಕಾಂಗ್ರೆಸ್ ಹೈಕಮಾಂಡ್ ಈ ವಿಚಾರಾವಾಗಿ ವರದಿ ತರಿಸಿಕೊಂಡು ತನಿಖೆ ನಡೆಸಲು ಸಮ್ಮತಿ ನೀಡಬೇಕು ಎಂದು ಹೇಳಿದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…