Mysore
30
light rain

Social Media

ಗುರುವಾರ, 03 ಅಕ್ಟೋಬರ್ 2024
Light
Dark

ಮತ್ತೆ ಕ್ಷಮೆಯಾಚಿಸಿ ಜಿಟಿ ಮಾಲ್‌ ಬಂದ್‌ ಮಾಡಿದ ಮಾಲೀಕ

ಬೆಂಗಳೂರು: ರೈತನಿಗೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಬಿಎಂಪಿ ಸೂಚನೆ ಮೇರೆಗೆ ಜಿ.ಟಿ ಮಾಲ್‌ ಮಾಲೀಕರು ಸ್ವಯಂಪ್ರೇರಿತವಾಗಿ ಮಾಲನ್ನು ಬಂದ್‌ ಮಾಡಿದ್ದಾರೆ.

ಪಂಚೆ ಧರಿಸಿದ್ದಾರೆ ಎನ್ನುವ ಕಾರಣಕ್ಕೆ ನಿನ್ನೆ ಮಾಗಡಿ ರಸ್ತೆಯಲ್ಲಿರುವ ಜಿ ಟಿ ಮಾಲ್‌ನ ಒಳಗೆ ರೈತನನ್ನು ಬಿಟ್ಟಿರಲಿಲ್ಲ. ಈ ಘಟನೆ ನಡೆಯುತ್ತಿದ್ದಂತೆ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಘಟನೆ ಸದನದಲ್ಲೂ ಕೂಡ ಭಾರೀ ಚರ್ಚೆಯಾಗಿತ್ತು. ಇದೀಗ ಬಿಬಿಎಂಪಿ ಸೂಚನೆಯಂತೆ ಜಿಟಿ ಮಾಲ್‌ನ್ನು ಸ್ವಯಂಪ್ರೇರಿತವಾಗಿ ಮಾಲೀಕರು ಬಂದ್‌ ಮಾಡಿದ್ದಾರೆ.

ಈ ಬಗ್ಗೆ ಮಾಲ್‌ ಮಾಲೀಕ ಆನಂದ್‌ ಪುತ್ರ ಪ್ರಶಾಂತ್‌ ಮಾತನಾಡಿದ್ದು, ಆಗಬಾರದಂತೆ ಘಟನೆ ನಡೆದಿದೆ. ನಾನು ಈ ಘಟನೆಗೆ ಕ್ಷಮೆ ಕೇಳುತ್ತಿದ್ದೇನೆ. ತಪ್ಪು ಮಾಡಿದ ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Tags: