ಬೆಂಗಳೂರು: ರೈತನಿಗೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಬಿಎಂಪಿ ಸೂಚನೆ ಮೇರೆಗೆ ಜಿ.ಟಿ ಮಾಲ್ ಮಾಲೀಕರು ಸ್ವಯಂಪ್ರೇರಿತವಾಗಿ ಮಾಲನ್ನು ಬಂದ್ ಮಾಡಿದ್ದಾರೆ.
ಪಂಚೆ ಧರಿಸಿದ್ದಾರೆ ಎನ್ನುವ ಕಾರಣಕ್ಕೆ ನಿನ್ನೆ ಮಾಗಡಿ ರಸ್ತೆಯಲ್ಲಿರುವ ಜಿ ಟಿ ಮಾಲ್‌ನ ಒಳಗೆ ರೈತನನ್ನು ಬಿಟ್ಟಿರಲಿಲ್ಲ. ಈ ಘಟನೆ ನಡೆಯುತ್ತಿದ್ದಂತೆ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಘಟನೆ ಸದನದಲ್ಲೂ ಕೂಡ ಭಾರೀ ಚರ್ಚೆಯಾಗಿತ್ತು. ಇದೀಗ ಬಿಬಿಎಂಪಿ ಸೂಚನೆಯಂತೆ ಜಿಟಿ ಮಾಲ್‌ನ್ನು ಸ್ವಯಂಪ್ರೇರಿತವಾಗಿ ಮಾಲೀಕರು ಬಂದ್ ಮಾಡಿದ್ದಾರೆ.
ಈ ಬಗ್ಗೆ ಮಾಲ್ ಮಾಲೀಕ ಆನಂದ್ ಪುತ್ರ ಪ್ರಶಾಂತ್ ಮಾತನಾಡಿದ್ದು, ಆಗಬಾರದಂತೆ ಘಟನೆ ನಡೆದಿದೆ. ನಾನು ಈ ಘಟನೆಗೆ ಕ್ಷಮೆ ಕೇಳುತ್ತಿದ್ದೇನೆ. ತಪ್ಪು ಮಾಡಿದ ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮಂಡ್ಯ: ಕನ್ನಡ ಕರ್ನಾಟಕ ಫೌಂಡೇಶನ್, ಎಂಪ್ಟಿ ಪಾಕೆಟ್ ಡ್ರೀಮ್ಸ್ ಜೊತೆಗೂಡಿ ಆಯೋಜಿಸಿದ್ದ ಆಪ್ತ ಸಂವಾದ: ಒಂದು ಪುಸ್ತಕ ಕ್ರಾಂತಿ ಕಾರ್ಯಕ್ರಮದ…
ಬೆಂಗಳೂರು: ಗಾಯಕಿ ಮಂಗ್ಲಿ ಮತ್ತು ಅವರ ಸಹೋದರನ ವಿರುದ್ಧ ೧೦ ಕೋಟಿ ರೂ. ಮೋಸದ ಆರೋಪದಡಿ ಪಂಜಗುಟ್ಟ ಪೊಲೀಸರು ಪ್ರಕರಣ…
ಬೆಂಗಳೂರು: ರಾಜ್ಯದ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ…
ದಾವಣಗೆರೆ: ಉಪಚುನಾವಣೆ ಮುಗಿದ ಬೆನ್ನಲ್ಲೇ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಉಸ್ತುವಾರಿ…
ಬೆಂಗಳೂರು: ಸಾಂಸ್ಕೃತಿಕ ನಗರ ಮೈಸೂರಿನ ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ವದಂತಿಯನ್ನು ಕೇಂದ್ರ ರೈಲ್ವೆ ಸಚಿವ…
ಬೀದರ್: ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.…