Mysore
24
haze

Social Media

ಶನಿವಾರ, 06 ಡಿಸೆಂಬರ್ 2025
Light
Dark

ಯಾರೋ ಒಬ್ಬರಿಂದ ಪಕ್ಷ ಅಧಿಕಾರಕ್ಕೆ ಬಂದಿಲ್ಲ : ಡಿಕೆಶಿಗೆ ಸತೀಶ್ ಜಾರಕಿಹೊಳಿ ಟಾಂಗ್

ಬೆಳಗಾವಿ : ಕೆಲವೇ ಜನರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂಬುದನ್ನು ನಾನು ಒಪ್ಪುವುದಿಲ್ಲ. ನಮಗಿರುವ 1 ಕೋಟಿ 25 ಲಕ್ಷ ಮತದಾರರಿಂದ ನಾವು ಶಾಸಕರು, ಮಂತ್ರಿ ಆಗಿದ್ದೇವೆ. ಹಾಗಾಗಿ, ನಮಗೆ ಇತಿಮಿತಿ ಇರಬೇಕು. ಎಲ್ಲವೂ ನನ್ನಿಂದಲೇ ಆಗಿದೆ ಎನ್ನುವುದು ಬಹಳ ತಪ್ಪು ಎಂದು ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ಕೊಟ್ಟರು.

ಬೆಳಗಾವಿಯಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ಅಧಿಕಾರಕ್ಕೆ ಬರಲು ಬಹಳಷ್ಟು ಜನ ಪ್ರತ್ಯಕ್ಷ, ಪರೋಕ್ಷವಾಗಿ ದುಡಿದಿದ್ದಾರೆ. 1960ರಲ್ಲಿ ತೇನ್‌ಸಿಂಗ್ ಹಿಮಾಲಯ ಪರ್ವತ ಏರಿದಾಗ ಇಡೀ ಜಗತ್ತಿನ ಎಲ್ಲ ಪತ್ರಿಕೆಗಳು ತೇನ್‌ಸಿಂಗ್ ಹಿಮಾಲಯ ಏರಿದರು ಎಂದು ಬರೆದರು. ಅವರ ಜೊತೆಗೆ ಇನ್ನೂ 14 ಜನರಿದ್ದರು. ಅವರ ಹೆಸರು ಬರಲಿಲ್ಲ. ಇದೂ ಕೂಡಾ ಹಾಗೇ ಆಗಿದೆ ಎಂದರು.

ಇದನ್ನು ಓದಿ: ಷೇರು ಮಾರುಕಟ್ಟೆ ಹೆಸರಲ್ಲಿ ವಂಚನೆ : ದೂರು

ಪಕ್ಷ ಅಧಿಕಾರಕ್ಕೆ ಬರಲು ಎಲ್ಲರ ಸಹಕಾರವಿದೆ. ಮೊದಲ ಬಾರಿ ಆರಿಸಿ ಬಂದವರೂ ಸೇರಿ ಬಹಳಷ್ಟು ಶಾಸಕರು ಸಂಕಷ್ಟದಲ್ಲಿದ್ದಾರೆ. ಪಕ್ಷ, ಶಾಸಕರು ಮತ್ತು ಕಾರ್ಯಕರ್ತರ ಶ್ರಮದಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ ಎನ್ನುವುದನ್ನು ಗಮನಿಸಬೇಕು. ಎಲ್ಲರಿಗೂ ಅಷ್ಟೇ ಪ್ರಾಮುಖ್ಯತೆ ಸಿಗಬೇಕು. ಎಲ್ಲರ ಸಹಕಾರವಿದೆ. ಅಧಿಕಾರಕ್ಕೆ ಬರಲು ಅವರದೇ ಸ್ವಂತ ಎಫರ್ಟ್ ಇದೆ. ಹಾಗಾಗಿ, ಸ್ವಾಭಾವಿಕವಾಗಿ ಎಲ್ಲರೂ ಕ್ಲೆ ಮ್ ಮಾಡುತ್ತಾರೆ. ಆದರೆ, ಅದರ ಶ್ರೇಯಸ್ಸನ್ನು ಕೆಲವೇ ಜನರು ತೆಗೆದುಕೊಳ್ಳುವುದನ್ನು ನಾವು ಒಪ್ಪುವುದಿಲ್ಲ ಎಂದರು.

ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಾಗ ಮಾಡುವ ಹೇಳಿಕೆಗೆ ಪ್ರತಿಕ್ರಿಯಿಸಿ, ಪಕ್ಷಕ್ಕೆ ಒಂದು ಲಿಮಿಟ್ ಇದ್ದೇ ಇರುತ್ತದೆ. ಯಾವುದೇ ಹುದ್ದೆ ಇದ್ದರೂ ಬದಲಾವಣೆ ಮಾಡುವ ಒಂದು ಕಾಲ ಬಂದೇ ಬರುತ್ತದೆ. ಇವತ್ತು ಬರಬಹುದು, ಒಂದು ವರ್ಷ ಬಿಟ್ಟು ಬರಬಹುದು. ಯಾವುದೇ ಸಂದರ್ಭದಲ್ಲಿ ಬರಬಹುದು ಎಂದು ಹೇಳಿದರು.

Tags:
error: Content is protected !!