Mysore
23
overcast clouds

Social Media

ಬುಧವಾರ, 22 ಏಪ್ರಿಲ 2026
Light
Dark

ಪಕ್ಷ ಯಾರನ್ನೂ ನೆಚ್ಚಿಕೊಂಡಿಲ್ಲ: ನಿಖಿಲ್‌ ಕುಮಾರಸ್ವಾಮಿ

nikhil kumaraswamy siddaramaiah

ಬೆಂಗಳೂರು: ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಜೆಡಿಎಸ್‌ ಸೇರುತ್ತಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ ಪಕ್ಷ ಯಾರನ್ನೂ ನೆಚ್ಚಿಕೊಂಡಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಅವರು ಸ್ಪಷ್ಟೀಕರಣ ನೀಡಿದ್ದಾರೆ. ಜಮೀರ್‌ಗೆ ಕಾಂಗ್ರೆಸ್‌ ಸ್ಥಾನಮಾನ ಕೊಟ್ಟಿದೆ. ಆ ಬಗ್ಗೆ ಚರ್ಚೆ ಬೇಡ. ಪಕ್ಷವನ್ನು ಕಟ್ಟಲು ಕಾರ್ಯಕರ್ತರಿದ್ದಾರೆ. ಹೋರಾಟಕ್ಕೆ ಸಿದ್ಧರಿದ್ದಾರೆ ಎಂದು ಹೇಳಿದರು.

 

 

Tags:
error: Content is protected !!