ರಾಜ್ಯ

ನನಗೆ ಪಕ್ಷ ಮುಖ್ಯ, ಆತ್ಮಸಾಕ್ಷಿಯಂತೆ ನಡೆದುಕೊಳ್ಳುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಕನಕಪುರ: ಮುಖ್ಯಮಂತ್ರಿ ಮಾಡಿ ಎಂದು ತಾವು ಯಾರನ್ನು ಕೇಳಿಲ್ಲ. ಐದಾರು ಮಂದಿ ಮಧ್ಯೆ ದೆಹಲಿಯಲ್ಲಿ ನಡೆದ ಮಾತುಕತೆಯ ಗುಟ್ಟನ್ನು ಬಿಟ್ಟುಕೊಡಲು ನಾನು ಸಿದ್ಧನಿಲ್ಲ. ನನಗೆ ಪಕ್ಷ ಮುಖ್ಯ. ಆತ್ಮಸಾಕ್ಷಿಯಂತೆ ನಡೆದುಕೊಳ್ಳುತ್ತೇನೆ ಎಂದು ಹೇಳುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಚ್ಚರಿ ಮೂಡಿಸಿದ್ದಾರೆ.

ಈ ಕುರಿತು ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕೆ ಮುಜುಗರ ತರಲು ಅಥವಾ ದುರ್ಬಲಗೊಳಿಸಲು ನಾನು ಸಿದ್ಧನಿಲ್ಲ. ಪಕ್ಷ ಮತ್ತು ಕಾರ್ಯಕರ್ತರಿದ್ದರೆ ಮಾತ್ರ ನಾವು ಎಂದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿ ಏಳುವರೆ ವರ್ಷ ಪೂರ್ಣಗೊಳಿಸಿದ್ದಾರೆ. ಮುಂದಿನ ಬಜೆಟ್‌ ಅನ್ನು ಮಂಡಿಸುತ್ತೇನೆ ಎಂದಿದ್ದಾರೆ, ಬಹಳ ಸಂತೋಷ. ಅವರು ಕಾಂಗ್ರೆಸ್‌‍ಗೆ ದೊಡ್ಡ ಆಸ್ತಿ. ವಿರೋಧ ಪಕ್ಷದ ನಾಯಕರಾಗಿಯೂ ದುಡಿದಿದ್ದಾರೆ, ಪಕ್ಷ ಕಟ್ಟಿದ್ದಾರೆ. ನಾವೆಲ್ಲ ಸೇರಿ 2028ರ ವಿಧಾನಸಭೆ ಚುನಾವಣೆ, 2029ರ ಲೋಕಸಭೆ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ಕೆಲಸ ಮಾಡುತ್ತೇವೆ ಎಂದರು.

ಇದನ್ನು ಓದಿ: ರಾಜಕೀಯ ಗೊಂದಲಗಳಿಗೆ ಹೈಕಮಾಂಡ್‌ ಕೊನೆ ಆಡಬೇಕು: ಸಿಎಂ ಸಿದ್ದರಾಮಯ್ಯ

ಡಿ.ಕೆ.ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಕಾರಣಕ್ಕೆ ರಾಮನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್‌‍ ಶಾಸಕರು ಗೆದ್ದಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯಿಸಿದ ಅವರು, ಚುನಾವಣೆಯ ಸಂದರ್ಭದಲ್ಲಿ ನಾನು ಮಹದೇವಪ್ಪ ಅವರ ಕ್ಷೇತ್ರಕ್ಕೂ ಹೋಗಿ ನನ್ನ ಮುಖ ನೋಡಿ ಮತ ಹಾಕಿ ಎಂದಿದ್ದೇನೆ. ಮಂಡ್ಯದಲ್ಲೂ ಇದೇ ರೀತಿ ಕೇಳಿದ್ದೇನೆ. ಜನ ಸಾಮೂಹಿಕ ನಾಯಕತ್ವಕ್ಕೆ ಮತ ಕೊಟ್ಟಿದ್ದಾರೆ. ಇಲ್ಲಿ ನನ್ನಿಂದಲೇ ಆಯಿತು ಎನ್ನುತ್ತಿಲ್ಲ ಎಂದರು.

ನಾಯಕರಿಗಿಂತಲೂ ಕಾರ್ಯಕರ್ತರು ಪ್ರಾಣ ಕೊಟ್ಟು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಬಾವುಟ ಕಟ್ಟಿ, ಬಡಿದಾಡಿಕೊಂಡು ಪಕ್ಷವನ್ನು ಗೆಲ್ಲಿಸಿದ್ದಾರೆ. ನಾವು ಈವರೆಗೂ ಅವರಿಗೆ ಯಾವ ಅಧಿಕಾರವನ್ನು ನೀಡಿಲ್ಲ. ಶಾಸಕರು ಕಾರ್ಯಕರ್ತರ ಶ್ರಮದ ಫಲಾನುಭವಿಗಳು. ಮೇಕೆದಾಟು ಪಾದಯಾತ್ರೆಗೆ ಯಾರು ಇಲ್ಲದಾಗ ಎಂದಾಗ ನಡೆದೆ ನಡೆಯುತ್ತೇವೆ ಎಂದು ಸಿದ್ದರಾಮಯ್ಯ ಮತ್ತು ನಾವು ನಿರ್ಧಾರ ಮಾಡಿದ್ದೆವು. ಕಾರ್ಯಕರ್ತರು ಊಟ, ನೀರು ಕೊಟ್ಟು ಬೆಂಬಲಿಸಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ: ಕನ್ನಡ ಶಾಲೆಗಳ ಉಳಿವಿಗೆ ಹೋರಾಟ: ವಾಟಾಳ್‌ ನಾಗರಾಜ್‌ ಬಂಧನ

ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ…

4 mins ago

ಸಫಾರಿ ಸ್ಥಗಿತ, ಪುನರಾರಂಭ ಸಮರ್ಥಿಸಿಕೊಂಡ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಕಳೆದ ನವೆಂಬರ್‌ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…

27 mins ago

ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ಅದ್ಧೂರಿಯಾಗಿ ಜರುಗಿದ ಅಗ್ನಿ ಕುಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ…

41 mins ago

ಕೊಡಗು| 13 ದಿನಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಮೂರನೇ ಬಲಿ: ಕಾಫಿ ಬೆಳೆಗಾರ ದಾರುಣ ಸಾವು

ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ…

53 mins ago

ಮಂಡ್ಯ ಕೋರ್ಟ್‌ಗೆ ಮತ್ತೆ ಬಾಂಬ್ ಬೆದರಿಕೆ : ಸ್ಥಳಕ್ಕೆ ಪೊಲೀಸ್-ಬಾಂಬ್ ಸ್ಕ್ವಾಡ್ ದೌಡು

ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್‌ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು…

2 hours ago

ಯುದ್ಧ ನಿಲ್ಲಿಸಲು 3 ಷರತ್ತು ಮುಂದಿಟ್ಟ ಇರಾನ್‌!

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಅಮೆರಿಕಾ ಹಾಗೂ ಇಸ್ರೇಲ್ ಜೊತೆ ನಡೆಯುತ್ತಿರುವ ಸಂಘರ್ಷವನ್ನು ಅಂತ್ಯಗೊಳಿಸಲು…

2 hours ago