ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ.
ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು ಕಕ್ಕಾಬಿಕ್ಕಿಯಾಗಿದ್ದಾರೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ದಾಖಲಾಗುತ್ತಿದೆ. ಅದೇ ರೀತಿ ಕನಿಷ್ಠ ತಾಪಮಾನ ಸರಾಸರಿ ೧೫ ಡಿ.ಸೆ.ಗಿಂತ ಕಡಿಮೆಯಾಗುತ್ತಿದೆ. ಕರಾವಳಿ ಭಾಗದಲ್ಲಿ ಮಾತ್ರ ಕನಿಷ್ಠ ತಾಪಮಾನ ೧೫ ಡಿ.ಸೆ.ಗಿಂತ ಹೆಚ್ಚಾಗಿದ್ದು, ಗರಿಷ್ಠ ತಾಪಮಾನವು ೩೦ ಡಿ.ಸೆ.ಗಿಂತ ಹೆಚ್ಚಿದೆ. ಬಿಸಿಲ ನಾಡೆಂದೇ ಬಿಂಬಿಸಲಾಗುವ ಕಲ್ಯಾಣ ಕರ್ನಾಟಕ ಭಾಗ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಗಣನೀಯವಾಗಿ ಕುಸಿಯುತ್ತಿದ್ದು, ಮೈ ಕೊರೆಯುವ ಚಳಿ ಜನರನ್ನು ಬಾಧಿಸುತ್ತಿದೆ.
ಹಿಂಗಾರು ಮಳೆ ಕೈಕೊಟ್ಟು ವಾಡಿಕೆಗಿಂತ ಕಡಿಮೆಯಾಗಿದೆ. ಅಲ್ಲದೆ ಮೇಲಿಂದ ಮೇಲೆ ಉಂಟಾದ ಚಂಡಮಾರುತಗಳ ಪ್ರಭಾವದಿಂದಲೂ ಆಗಾಗ್ಗೆ ಬೀಸಿದ ಶೀತ ಗಾಳಿ ಜನರನ್ನು ತತ್ತರಿಸುವಂತೆ ಮಾಡಿದೆ. ಮೈಕೊರೆಯುವ ಚಳಿಯ ಜೊತೆಗೆ ಆಗಾಗ್ಗೆ ಬೀಸುವ ಮೇಲ್ಮೈ ಶೀತ ಗಾಳಿಗೆ ಜನರು ಹೈರಾಣಾಗಿದ್ದಾರೆ.
ಚಳಿಯಿಂದ ರಕ್ಷಣೆ ಪಡೆಯಲು ಬೆಚ್ಚನೆಯ ಹೊದಿಕೆಗಳ ಮೊರೆ ಹೋಗಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಚಳಿಯ ಪ್ರಮಾಣ ವಾಡಿಕೆಗಿಂತ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜನರು ಮುನ್ನಚ್ಚರಿಕೆ ವಹಿಸಿ ರಾತ್ರಿ ಹಾಗೂ ಮುಂಜಾನೆ ಬೆಚ್ಚನೆಯ ಉಡುಪುಗಳನ್ನು ಧರಿಸಿ ಕಾರ್ಯ ನಿರ್ವಹಿಸುವಂತೆ ಸಲಹೆ ಮಾಡಿದ್ದಾರೆ.
ಬೆಳಗಾವಿಯಲ್ಲಿ ಕನಿಷ್ಠ ತಾಪಮಾನ ೧೦.೪ ಡಿ.ಸೆ, ಬೀದರ್ ೭.೮, ವಿಜಯಪುರ ೭, ಧಾರವಾಡ ೯, ಗದಗ ೧೦.೨, ಕಲಬುರ್ಗಿ ೧೩, ಹಾವೇರಿ ೧೧.೮, ಕೊಪ್ಪಳ ೧೧.೯, ರಾಯಚೂರು ೯.೬, ಆಗುಂಬೆ ೧೦.೬, ಬೆಂಗಳೂರು ೧೩.೩, ದೇವನಹಳ್ಳಿ ವಿಮಾನ ನಿಲ್ದಾಣ ೧೪.೭, ಚಿತ್ರದುರ್ಗ ೧೪, ದಾವಣಗೆರೆ ೧೦, ಹಾಸನ ೮, ಚಿಂತಾಮಣಿ ೮.೪, ಮೈಸೂರು ೧೫.೪, ಶಿವಮೊಗ್ಗ ೧೧.೪ ಡಿ.ಸೆ.ನಷ್ಟು ಕನಿಷ್ಠ ತಾಪಮಾನ ದಾಖಲಾಗಿದೆ.
ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…
ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…
ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…
ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್ ಮಾಡಿ ಬಹಳ…
ಮೈಸೂರು : ನಿರ್ದಿಷ್ಟ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…
ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…