ಚಿಕ್ಕಮಗಳೂರು : ಕೃಷಿ ಕುಟುಂಬದ ಯುವಕರು, ಉದ್ಯೋಗಕ್ಕಾಗಿ ಅಲೆದಾಡುವ ಬದಲು, ಬೇರೆಯವರ ಎದುರು ಕೆಲಸಕ್ಕೆ ಅವಲಂಬಿತರಾಗಿರುವವರಿಗೆ ಕಿರು ಉದ್ದಿಮೆ ಮಾದರಿಯಾಗಿದೆ ಹಾಗೂ ಸಹಕಾರಿಯಾಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು
ಚಿಕ್ಕಮಗಳೂರು ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಇಂದು ನಡೆದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮಬದ್ಧಗೊಳಿಸುವುಕೆ ಯೋಜನೆ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು..
ವಿದ್ಯೆಗೂ ವೃತ್ತಿಗೂ ಸಂಬಂಧವಿಲ್ಲ. ಶಿಕ್ಷಣ ಜ್ಞಾನಕಷ್ಟೇ ದಾರಿಯಾಗಿದೆ. ಸಾಮನ್ಯ ರೈತ ಕೃಷಿಯಲ್ಲಿ ತೊಡಗುವುದಕ್ಕೂ, ವಿದ್ಯಾವಂತರಾದವರೂ ತೊಡಗುವುದಕ್ಕೂ ವ್ಯತ್ಯಾಸವಿದೆ.
ಕಿರು ಉದ್ದಿಮೆ ನಡೆಸುವ ರೈತರಿಗೆ, ಹಾಗೂ ಯುವ ಸಮುದಾಯಕ್ಕೆ ದೊಡ್ಡ ಪ್ರಮಾಣದಲ್ಲಿ ಸಬ್ಸಿಡಿಯನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಒಟ್ಟು 15 ಲಕ್ಷ ರೂಪಾಯಿ ಸಬ್ಸಡಿಯಲ್ಲಿ 9 ಲಕ್ಷ ಸಬ್ಸಡಿಯನ್ನು ರಾಜ್ಯ ಸರ್ಕಾರ ಭರಿಸಿದರೆ, 6 ಲಕ್ಷ ರೂಪಾಯಿ ಸಬ್ಸಿಡಿಯನ್ನು ಮಾತ್ರ ಕೇಂದ್ರ ಸರ್ಕಾರ ಭರಿಸುತ್ತಿದೆ. ಇದು ದೇಶದಲ್ಲಿ ನಮ್ಮ ಕರ್ನಾಟಕ ರಾಜ್ಯದಲ್ಲಿ ಮಾತ್ರ 60% ಸಬ್ಸಿಡಿ ನೀಡುತ್ತಿರುವುದು ಎಂದು ಸಚಿವರು ತಿಳಿಸಿದರು.
ರೈತರು ಬೆಳೆದ ಬೆಳೆಯನ್ನು ತಕ್ಷಣಕ್ಕೆ ಮಾರಾಟ ಮಾಡದೇ, ಅದನ್ನು ಸಂಸ್ಕರಣೆ ಮಾಡಿ, ಬ್ರ್ಯಾಂಡ್ ಮಾಡಿ, ವೈವಿಧ್ಯಮಯ ನಾವೀನ್ಯತೆಯ ಉತ್ಪನ್ನಗಳನ್ನು ತಯಾರಿಸಿ ಮಾರುಕಟ್ಟೆಗೆ ನೀಡಿದರೆ ಅಧಿಕ ಲಾಭ ಸಂಪಾದಿಸಬಹುದು. ಬ್ಯಾಂಕಿನಿಂದ ಸಿಗುವ ಸಾಲ ಸೌಲಭ್ಯವನ್ನು ಬಳಸಿಕೊಂಡು ಪ್ರತಿಯೊಂದು ಕುಟುಂಬವೂ ಸ್ವಾವಲಂಬಿಯಾಗಿ ಬದುಕಬೇಕು ಎಂದು ತಿಳಿಸಿದರು..
ಇನ್ನೂ ಉದ್ಯಮಕ್ಕೆ ಅರ್ಜಿ ಸಲ್ಲಿಸುವವರಿಗೆ ಬ್ಯಾಂಕ್ ಸಿಬಿಇಲ್ (CBIL) ಹಾಗೂ ಯಾವುದೇ ಬ್ಯಾಂಕ್ ಗ್ಯಾರಂಟಿ ನೀಡುವಂತೆ ಒತ್ತಡ ನೀಡದೇ ಸಾಲ ಸೌಲಭ್ಯ ನೀಡಬೇಕು. ಈ ಬಗ್ಗೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಗಮನಹರಿಸುವಂತೆ ಸಚಿವ ಚಲುವರಾಯಸ್ವಾಮಿಯವರು ಸೂಚನೆ ನೀಡಿದರು..
ಕಾರ್ಯಕ್ರಮದಲ್ಲಿ ಕೆಪೆಕ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಕಾಶ್, ಚಿಕ್ಕಮಗಳೂರು ಶಾಸಕ ತಮ್ಮಯ್ಯ, ಶೃಂಗೇರಿ ಶಾಸಕ ರಾಜೇಗೌಡ, ಕಡೂರು ಶಾಸಕ ಆನಂದ್, ವಿಧಾನಪರಿಷತ್ ಸದಸ್ಯ ಬೋಜೆಗೌಡ, ಚಿಕ್ಕಮಗಳೂರು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು.
ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…
ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…
ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…
ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…
ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…