ರಾಜ್ಯ

ಬಿಜೆಪಿ ದುರಾಡಳಿತದ ಫಲವೇ ಇಂದಿನ ಬೆಂಗಳೂರು ರಸ್ತೆ ಗುಂಡಿಗಳು : ಬಿಜೆಪಿಗೆ ಡಿಸಿಎಂ ಡಿಕೆಶಿ ಟಾಂಗ್‌

ಬೆಂಗಳೂರು : ರಸ್ತೆ ಗುಂಡಿಗಳು ಬಿಜೆಪಿ ಸರಕಾರದ ದುರಾಡಳಿತದ ಫಲ. ರಸ್ತೆಗುಂಡಿಗಳನ್ನು ಮುಚ್ಚಲು ನಾವು ಬದ್ಧರಾಗಿದ್ದು, ಇದಕ್ಕಾಗಿಯೇ ಮುಖ್ಯಮಂತ್ರಿಗಳು 750 ಕೋಟಿ ರೂ. ಅನುದಾನ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪನವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು.

ನಗರದಲ್ಲಿ ರಸ್ತೆಗುಂಡಿ ವಿಚಾರವಾಗಿ ಬಿಜೆಪಿ ಪ್ರತಿಭಟನೆ ಬಗ್ಗೆ ಕೇಳಿದಾಗ, ನಗರದಲ್ಲಿ ರಸ್ತೆಗುಂಡಿಗಳಿರುವುದು ನಿಜ. ಅವುಗಳನ್ನು ಮುಚ್ಚಲು ನಾವು ಕಾರ್ಯಪ್ರವೃತ್ತರಾಗಿದ್ದೇವೆ. ಎಲ್ಲೆಲ್ಲಿ ರಸ್ತೆಗುಂಡಿಗಳಿವೆ ಎಂದು ಮಾಹಿತಿ ನೀಡಿ ಎಂದು ಸಾರ್ವಜನಿಕರು, ಪೊಲೀಸರಿಗೆ ನಾನೇ ಮನವಿ ಮಾಡಿದ್ದೇನೆ. ಬಿಜೆಪಿ ಸರ್ಕಾರ ದುರಾಡಳಿತದ ಪರಿಣಾಮವಾಗಿ ಈ ಪರಿಸ್ಥಿತಿ ಬಂದಿದೆ. ನಾವು ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದರು.

ಇದನ್ನೂ ಓದಿ :-Mysuru Dasara | ದಸರಾಗೆ ಮತ್ತಷ್ಟು ಮೆರಗು ತಂದ ಏರ್‌ ಶೋ ; ಸಾಹಸಮಯ ಪ್ರದರ್ಶನ

ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಯಾವುದೇ ಅನುದಾನ ಕೊಟ್ಟಿಲ್ಲ ಎಂಬುದನ್ನು ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ಅರ್ಥಮಾಡಿಕೊಳ್ಳಬೇಕು. ನಾವು ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಪಾವತಿ ಮಾಡುತ್ತಿದ್ದರೂ ಅವರು ಅನುದಾನ ನೀಡಿಲ್ಲ. ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲೂ ಕೇಂದ್ರ ಸರ್ಕಾರದಿಂದ ಬೆಂಗಳೂರಿಗೆ ಸೂಕ್ತ ಅನುದಾನ ಸಿಕ್ಕಿಲ್ಲ. ಆದರೂ ನಾವು ಬೆಂಗಳೂರಿನ ಹಿತ ಕಾಪಾಡುತ್ತೇವೆ ಎಂದರು.

ಬಿಜೆಪಿಗರು ಪ್ರತಿಭಟನೆ ಮಾಡಲಿ, ನಮ್ಮ ಕಾರ್ಯಕರ್ತರು ಬಿಜೆಪಿ ಆಡಳಿತದಲ್ಲಿರುವ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಇತರೆ ಪಾಲಿಕೆಗಳಲ್ಲಿರುವ ರಸ್ತೆಗುಂಡಿ ಸಮಸ್ಯೆ ಬಗ್ಗೆ ಪ್ರತಿಭಟಿಸಲಿದ್ದಾರೆ ಎಂದು ತಿಳಿಸಿದರು.
ಉದ್ಯಮಿಗಳ ಜೊತೆ ಚರ್ಚೆ ಮಾಡುತ್ತೀರಾ ಎಂದು ಕೇಳಿದಾಗ, ನಮ ಸ್ನೇಹಿತರಾದ ಅವರುಗಳು ಕೂಡ ತಮ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು.

ಬಿಹಾರದ ಪಾಟ್ನಾದಲ್ಲಿ ನಡೆದ ಸಿಡಬ್ಲ್ಯೂಸಿ ಸಭೆಯ ನಿರ್ಣಯಗಳ ಕುರಿತು ಕೇಳಿದಾಗ, ಈ ವಿಚಾರವಾಗಿ ನಾನು ಇಂದು ಮಾತನಾಡುವುದಿಲ್ಲ. ನಾವು ಸಂವಿಧಾನಬದ್ಧವಾಗಿ ಸಿಕ್ಕಿರುವ ಒಬ್ಬ ವ್ಯಕ್ತಿಗೆ ಒಂದು ಮತ ಎಂಬ ಹಕ್ಕಿನ ರಕ್ಷಣೆಗೆ ನಾವು ಬದ್ಧವಾಗಿದ್ದೇವೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

9 mins ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

34 mins ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

1 hour ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

2 hours ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

2 hours ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago