ಬೆಂಗಳೂರು: ನಾವು ಸಿಎಂ ಸಿದ್ದರಾಮಯ್ಯರ ಪರವಿದ್ದೇವೆ. ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವ ಆಗಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೆಹಲಿಯಿಂದ ಒತ್ತಡ ಬಂದಿರುವ ಕಾರಣ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ಕೊಟ್ಟಿದ್ದಾರೆ.
ಮುಡಾ ಪ್ರಕರಣದ ಬಗ್ಗೆ ಸ್ಪಷ್ಟೀಕರಣ ಕೊಟ್ಟಿದ್ದೆವು. ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ಕೊಡಲ್ಲ ಎಂಬ ವಿಶ್ವಾಸ ಇತ್ತು. ಆದರೆ ಅದು ಸುಳ್ಳಾಗಿದೆ. ಈಗ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಇದನ್ನು ನಾವು ಕಾನೂನಾತ್ಮಕವಾಗಿ ಎದುರಿಸುತ್ತೇವೆ. ಈಗ ರಾಜಭವನ ದುರುಪಯೋಗ ಆಗುತ್ತಿದೆ. ಇದನ್ನು ನಾವು ದ್ವೇಷದ ನಡೆ ಅಂತಾನೆ ಭಾವಿಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ಇನ್ನು ನಮ್ಮ ಕಾನೂನು ತಂಡ ಮುಂದೆ ಏನು ತೀರ್ಮಾನ ಮಾಡುತ್ತದೆ ಎಂಬುದನ್ನು ನೋಡಬೇಕು. ಸಿಎಂ ಸಿದ್ದರಾಮಯ್ಯರ ರಾಜೀನಾಮೆ ಪ್ರಶ್ನೆ ಈಗ ಉದ್ಭವಿಸಲ್ಲ. ನಾವು ಸಿದ್ದರಾಮಯ್ಯ ಪರ ಇದ್ದೇವೆ. ಕೇಂದ್ರ ಸರ್ಕಾರ ಏನೇ ಮಾಡಿದ್ರೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ ಎಂದು ಸ್ಪಷ್ಟಪಡಿಸಿದರು.





