ರಾಜ್ಯ

ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದ ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ನಾವು ಸಿಎಂ ಸಿದ್ದರಾಮಯ್ಯರ ಪರವಿದ್ದೇವೆ. ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವ ಆಗಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೆಹಲಿಯಿಂದ ಒತ್ತಡ ಬಂದಿರುವ ಕಾರಣ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ಕೊಟ್ಟಿದ್ದಾರೆ.

ಮುಡಾ ಪ್ರಕರಣದ ಬಗ್ಗೆ ಸ್ಪಷ್ಟೀಕರಣ ಕೊಟ್ಟಿದ್ದೆವು. ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ಕೊಡಲ್ಲ ಎಂಬ ವಿಶ್ವಾಸ ಇತ್ತು. ಆದರೆ ಅದು ಸುಳ್ಳಾಗಿದೆ. ಈಗ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಇದನ್ನು ನಾವು ಕಾನೂನಾತ್ಮಕವಾಗಿ ಎದುರಿಸುತ್ತೇವೆ. ಈಗ ರಾಜಭವನ ದುರುಪಯೋಗ ಆಗುತ್ತಿದೆ. ಇದನ್ನು ನಾವು ದ್ವೇಷದ ನಡೆ ಅಂತಾನೆ ಭಾವಿಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ಇನ್ನು ನಮ್ಮ ಕಾನೂನು ತಂಡ ಮುಂದೆ ಏನು ತೀರ್ಮಾನ ಮಾಡುತ್ತದೆ ಎಂಬುದನ್ನು ನೋಡಬೇಕು. ಸಿಎಂ ಸಿದ್ದರಾಮಯ್ಯರ ರಾಜೀನಾಮೆ ಪ್ರಶ್ನೆ ಈಗ ಉದ್ಭವಿಸಲ್ಲ. ನಾವು ಸಿದ್ದರಾಮಯ್ಯ ಪರ ಇದ್ದೇವೆ. ಕೇಂದ್ರ ಸರ್ಕಾರ ಏನೇ ಮಾಡಿದ್ರೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ ಎಂದು ಸ್ಪಷ್ಟಪಡಿಸಿದರು.

 

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: 9 ಮಂದಿಗೆ ಗಾಯ

ಹನೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಜನರು ಗಾಯಗೊಂಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಮಹದೇಶ್ವರ ಐಟಿಐ ಕಾಲೇಜು…

9 hours ago

ಹುಬ್ಬೆ ಹುಣಸೆ ಡ್ಯಾಂ ಭರ್ತಿ, ಇದು ಮಾದಪ್ಪನ ಕೃಪೆ ಎಂದ ಶಾಸಕ ಮಂಜುನಾಥ್

ಹನೂರು : ಕ್ಷೇತ್ರದ ಅಧಿದೇವತೆ ಮಲೆ ಮಾದೇಶ್ವರ ಸ್ವಾಮಿ ಕೃಪೆಯಿಂದಲೇ ಈ ಬಾರಿ ಉತ್ತಮ ಮಳೆಯಾಗಿ, ಬರಗಾಲದಿಂದ ಕಂಗೆಟ್ಟಿದ್ದ ರೈತರ…

9 hours ago

ಓದುಗರ ಪತ್ರ: ‘ಜಗವೆ ಕೊಂಡಾಡುವ ಹಾಗೆ’

‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…

13 hours ago

ಓದುಗರ ಪತ್ರ: ಮೈಕ್ರೋ ಜೆರಾಕ್ಸ್ ಹಾವಳಿಗೆ ಕಡಿವಾಣ ಹಾಕಿ

ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…

13 hours ago

ಓದುಗರ ಪತ್ರ: ಅಂಬೇಡ್ಕರ್ ಪ್ರತಿಮೆಗೆ ದೀಪಾಲಂಕಾರ ವ್ಯವಸ್ಥೆಯಾಗಲಿ

ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ  ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…

13 hours ago

ಓದುಗರ ಪತ್ರ: ಮಿತಿ ಹೆಚ್ಚಳ ಕಾರ್ಮಿಕ ಸ್ನೇಹಿ ನಿರ್ಧಾರ

ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…

13 hours ago