ರಾಜ್ಯ

ಗೃಹ ನಿರ್ಮಾಣದ ಕನಸು ನನಸಾಗಿಸುವಲ್ಲಿ ಸಹಕಾರ ವಲಯದ ಪಾತ್ರ ಶ್ಲಾಘನೀಯ : ಶಾಸಕ ಜಿ.ಟಿ. ದೇವೇಗೌಡ

ಬೆಂಗಳೂರು : ಗೃಹ ನಿರ್ಮಾಣ ಸಹಕಾರ ಸಂಘಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಉತ್ತಮ ಪರಿಹಾರ ಕಂಡುಕೊಳ್ಳಲು ಮಹಾಮಂಡಳ ಸದಾಸಿದ್ದ. ಇಂದು ಅಬಲ ವರ್ಗದವರ ಗೃಹ ನಿರ್ಮಾಣದ ಕನಸು ನನಸು ಮಾಡುವಲ್ಲಿ ಗೃಹ ನಿರ್ಮಾಣ ಸಹಕಾರ ಸಂಘಗಳು ವಹಿಸುತ್ತಿರುವ ಪಾತ್ರ ಶ್ಲಾಘನೀಯವೆಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರು ಹಾಗೂ ಶಾಸಕರಾದ ಜಿ.ಟಿ. ದೇವೇಗೌಡ ಅವರು ಅಭಿಪ್ರಾಯಪಟ್ಟರು.

​ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳ ಮತ್ತು ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟಿçÃಯ ಸಹಕಾರ ವರ್ಷ ೨೦೨೫ರ ಪ್ರಯುಕ್ತ ಏರ್ಪಡಿಸಿದ್ದ ವಸತಿ ಸಹಕಾರ ಸಂಘಗಳ ರಾಜ್ಯಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

​ಮುಂದುವರೆದು ಮಾತನಾಡುತ್ತಾ ನಗರಾಭಿವೃದ್ಧಿ ಪ್ರಾಧಿಕಾರಗಳಿಗಿಂತ ಗೃಹ ನಿರ್ಮಾಣ ಸಹಕಾರ ಸಂಘಗಳು ಇಂದು ಹೆಚ್ಚಿನ ನಿವೇಶನ ಹಂಚಿಕೆ ಮಾಡಿವೆ. ಆದ್ದರಿಂದ ಗೃಹ ನಿರ್ಮಾಣ ಸಹಕಾರ ಸಂಘಗಳು ತರಬೇತಿಯ ಪ್ರಯೋಜನ ಪಡೆದು ಯಶಸ್ವಿಯಾಗಿ ಗೃಹ ನಿರ್ಮಾಣ ಕಾರ್ಯವನ್ನು ನಿರ್ವಹಿಸಿ ಎಂದರು.

ಇದನ್ನೂ ಓದಿ:-ಧರ್ಮಸ್ಥಳ | ಷಡ್ಯಂತ್ರ ಮಾಡಿದವರ ಬಣ್ಣ ಬಯಲಾಗುತ್ತಿದೆ ; ಸಂಸದ ಯದುವೀರ್‌

​ಸರ್ಕಾರದ ಗಮನಕ್ಕೆ ಮಹಾಮಂಡಳದ ಮೂಲಕ ಹಲವು ಬೇಡಿಕೆಗಳನ್ನು ತರಲಾಗಿದೆ. ಅವುಗಳಲ್ಲಿ ಸಹಕಾರ ವಿಷಯವನ್ನು ಅಧ್ಯಯನ ಮಾಡಿದವರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವುದು ಜತೆಗೆ ಸಹಕಾರ ವಿಷಯಗಳನ್ನು ಪಠ್ಯಪುಸ್ತಕದಲ್ಲಿ ಅಳವಡಿಸುವಂತೆ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗಿದೆ. ಮುಂದಿನ ದಿನಗಳಲ್ಲಿ ಗೃಹ ನಿರ್ಮಾಣ ಸಹಕಾರ ವಲಯದ ಯಾವುದೇ ಬೇಡಿಕೆ ಹಾಗೂ ಸಮಸ್ಯೆಗಳಿದ್ದರು ಅದನ್ನು ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

​ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳದ ಅಧ್ಯಕ್ಷರು ಹಾಗೂ ಶಾಸಕರಾದ ಎಸ್.ಟಿ. ಸೋಮಶೇಖರ್ ಅವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ವಸತಿ ಮಹಾಮಂಡಳದ ಉಪಾಧ್ಯಕ್ಷರಾದ ಜಿ.ಪಿ. ಪಾಟೀಲ್, ಖಜಾಂಚಿ ಬಿ.ಸಿ. ಶಿವಲಿಂಗೇಗೌಡ, ನಿರ್ದೇಶಕರಾದ ಸುಮಾ ಜನಾರ್ಧನ್, ವ್ಯವಸ್ಥಾಪಕ ನಿರ್ದೇಶಕರಾದ ವೈ.ಹೆಚ್. ಗೋಪಾಲಕೃಷ್ಣ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಉಪಾಧ್ಯಕ್ಷರಾದ ಜಗದೀಶ್ ಎಂ. ಕವಟಗಿಮಠ, ನಿರ್ದೇಶಕರಾದ ಆರ್. ರಾಮರೆಡ್ಡಿ, ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಸ್. ನವೀನ್, ಕಾರ್ಯದರ್ಶಿ ಅಶ್ವತ್ಥನಾರಾಯಣ, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷರಾದ ಜೆ. ಮಂಜುನಾಥ್, ಜಂಟಿ ನಿಬಂಧಕರಾದ ಡಾ. ಜಿ. ಉಮೇಶ್ ಮತ್ತಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

2 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

2 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

3 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

6 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

6 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

6 hours ago