ಬಳ್ಳಾರಿ: ಬಳ್ಳಾರಿಯಲ್ಲಿ ಗಲಾಟೆ, ಫೈರಿಂಗ್ ಪ್ರಕರಣ ಸಂಬಂಧ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಯಾರನ್ನೂ ಬಂಧಿಸಿಲ್ಲ ಎಂದು ಬಳ್ಳಾರಿ ವಲಯ ಡಿಐಜಿ ವರ್ತಿಕಾ ಕಟಿಯಾರ್ ತಿಳಿಸಿದ್ದಾರೆ.
ಶಾಸಕ ಜನಾರ್ಧನ ರೆಡ್ಡಿ ಮನೆ ಬಳಿಗೆ ಡಿಐಜಿ ವರ್ತಿಕಾ ಕಟಿಯಾರ್ ಭೇಟಿ ನೀಡಿ ಮನೆಯ ಸುತ್ತಮುತ್ತಾ ಪರಿಶೀಲನೆ ನಡೆಸಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಯಾರನ್ನೂ ಬಂಧಿಸಿಲ್ಲ. ಪರಿಸ್ಥಿತಿ ನಿಯಂತ್ರಣದಲ್ಲಿದೆ. ನಿಷೇಧಾಜ್ಞೆ ಜಾರಿ ಮಾಡಿಲ್ಲ. ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಸದ್ಯಕ್ಕೆ ಯಾವ ಸಮಸ್ಯೆಯೂ ಇಲ್ಲ ಎಂದು ತಿಳಿಸಿದರು.





