ಬೆಂಗಳೂರು : ರಾಜ್ಯಸಭಾ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ಪಕ್ಷದ ವಿಜೇತ ಅಭ್ಯರ್ಥಿ ನಾಸಿರ್ ಹುಸೇನ್ ವಿಜಯೋತ್ಸವದ ಸಂದರ್ಭದಲ್ಲಿ ಘೋಷಣೆಯ ವಿಡಿಯೋ ತಿರುಚಿಲ್ಲ ಎಂದು ಎಫ್‌ಎಸ್‌ಎಲ್ ವರದಿ ಖಚಿತಪಡಿಸಿದೆ.
ಈ ಕುರಿತು ಹಲವರ ದನಿ ಪರೀಕ್ಷೆಗೆ ಮುಂದಾಗಿರುವ ಪೊಲೀಸರು ಆರೋಪಿಯ ಬಂಧನಕ್ಕೆ ಸಿದ್ದತೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟಾರೆ ಇಪ್ಪತ್ತಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಬಳಿಕ ಒಂಬತ್ತು ಮಂದಿಯ ದ್ವನಿಯ ಮಾದರಿಯನ್ನು ಮುದ್ರೀಕರಿಸಿಕೊಂಡು ವಿಡಿಯೋದಲ್ಲಿರುವ ದನಿಯೊಂದಿಗೆ ತಾಳೆ ಮಾಡಲಾಗಿತ್ತು.
ಎಫ್‌ಎಸ್‌ಎಲ್‌ಗೆ ನೀಡಲಾಗಿದ್ದ ವಿಡಿಯೋವನ್ನು ಮಾರ್ಫ್ ಅಥವಾ ಎಡಿಟ್ ಮಾಡಿಲ್ಲವೆಂದು ಖಚಿತಪಡಿಸಲಾಗಿದೆ. ಆರೋಪ ಸಾಬೀತಾದರೆ ಆರೋಪಿಯ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾವ ಕಾರಣಕ್ಕೂ ಅವರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಶುಕ್ರವಾರ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.
ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್ ಅವರ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ…
ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…
ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‍ಗೆ…
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ…