ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಬೆಂಗಳೂರಿನಲ್ಲಿ ಇಷ್ಟೊಂದು ಅಧ್ವಾನ ಆಗಿರಲಿಲ್ಲ. ಈ ಬಾರಿ ಆಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಆರ್.ಅಶೋಕ್ ಅವರು, ಬೆಂಗಳೂರು ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಒಂದು ನಯಾಪೈಸೆಯನ್ನೂ ಬಿಡುಗಡೆ ಮಾಡಿಲ್ಲ. ಈ ರೀತಿ ಇರುವಾಗ ಅಭಿವೃದ್ಧಿ ಹೇಗೆ ಮಾಡಲು ಸಾಧ್ಯ? ಎಂದು ಪ್ರಶ್ನೆ ಮಾಡಿದರು.
ಇದನ್ನು ಓದಿ: ಲಂಕೆಯಲ್ಲಿ ರಾವಣ ಸಂಹಾರ ಆದ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಧೂಳೀಪಟ ಆಗಲಿದೆ : ಆರ್ ಅಶೋಕ್ ಆಕ್ರೋಶ
ಬೆಂಗಳೂರಿನಲ್ಲಿ ಎಲ್ಲಿ ನೋಡಿದರೂ ಅಲ್ಲಿ ರಸ್ತೆ ಗುಂಡಿ, ಕಸದ ರಾಶಿ, ಬೆಂಗಳೂರು ತುಂಬೆಲ್ಲಾ ಅಧ್ವಾನಗಳಿವೆ ಎಂದು ಕಿಡಿಕಾರಿದರು.
ಈ ಹಿಂದೆ ನಮ್ಮ ಸರ್ಕಾರ ಇದ್ದಾಗ ಬೆಂಗಳೂರು ಅಭಿವೃದ್ಧಿಗಾಗಿಯೇ ವಿಶೇಷ ಅನುದಾನದಡಿ ಹಣ ಬಿಡುಗಡೆ ಮಾಡಿದ್ದೆವು. ಆದರೆ ಕಾಂಗ್ರೆಸ್ ಸರ್ಕಾರ ನಯಾಪೈಸೆ ಬಿಡುಗಡೆ ಮಾಡಿಲ್ಲ. ಎರಡೂವರೆ ವರ್ಷಗಳಾದರೂ ಬೆಂಗಳೂರು ಅಭಿವೃದ್ಧಿಗಾಗಿ ಹಣ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಪಾಪರ್ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.





