ರಾಜ್ಯ

ರಾಜ್ಯ ಕಾಂಗ್ರೆಸ್‌ ಸರ್ಕಾರ ಪಾಪರ್‌ ಆಗಿದೆ: ಆರ್‌.ಅಶೋಕ್‌ ವ್ಯಂಗ್ಯ

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಬೆಂಗಳೂರಿನಲ್ಲಿ ಇಷ್ಟೊಂದು ಅಧ್ವಾನ ಆಗಿರಲಿಲ್ಲ. ಈ ಬಾರಿ ಆಗಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಆರ್.‌ಅಶೋಕ್‌ ಅವರು, ಬೆಂಗಳೂರು ಅಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರ ಒಂದು ನಯಾಪೈಸೆಯನ್ನೂ ಬಿಡುಗಡೆ ಮಾಡಿಲ್ಲ. ಈ ರೀತಿ ಇರುವಾಗ ಅಭಿವೃದ್ಧಿ ಹೇಗೆ ಮಾಡಲು ಸಾಧ್ಯ? ಎಂದು ಪ್ರಶ್ನೆ ಮಾಡಿದರು.

ಇದನ್ನು ಓದಿ: ಲಂಕೆಯಲ್ಲಿ ರಾವಣ ಸಂಹಾರ ಆದ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಧೂಳೀಪಟ ಆಗಲಿದೆ : ಆರ್‌ ಅಶೋಕ್‌ ಆಕ್ರೋಶ

ಬೆಂಗಳೂರಿನಲ್ಲಿ ಎಲ್ಲಿ ನೋಡಿದರೂ ಅಲ್ಲಿ ರಸ್ತೆ ಗುಂಡಿ, ಕಸದ ರಾಶಿ, ಬೆಂಗಳೂರು ತುಂಬೆಲ್ಲಾ ಅಧ್ವಾನಗಳಿವೆ ಎಂದು ಕಿಡಿಕಾರಿದರು.

ಈ ಹಿಂದೆ ನಮ್ಮ ಸರ್ಕಾರ ಇದ್ದಾಗ ಬೆಂಗಳೂರು ಅಭಿವೃದ್ಧಿಗಾಗಿಯೇ ವಿಶೇಷ ಅನುದಾನದಡಿ ಹಣ ಬಿಡುಗಡೆ ಮಾಡಿದ್ದೆವು. ಆದರೆ ಕಾಂಗ್ರೆಸ್‌ ಸರ್ಕಾರ ನಯಾಪೈಸೆ ಬಿಡುಗಡೆ ಮಾಡಿಲ್ಲ. ಎರಡೂವರೆ ವರ್ಷಗಳಾದರೂ ಬೆಂಗಳೂರು ಅಭಿವೃದ್ಧಿಗಾಗಿ ಹಣ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್‌ ಸರ್ಕಾರ ಪಾಪರ್‌ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

12 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

14 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

14 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

18 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

23 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

23 hours ago