Mysore
34
few clouds

Social Media

ಗುರುವಾರ, 09 ಏಪ್ರಿಲ 2026
Light
Dark

ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ದಾವಣಗೆರೆಯಲ್ಲಿ ಇಂದು ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಎಲ್‌ಪಿಜಿ ಸಿಲಿಂಡರ್ ಗೆ 414 ರೂ. ಇದ್ದದ್ದು , ಪ್ರಧಾನಿ ಮೋದಿಯವರು ಬಂದ ನಂತರ ಈಗ ಸುಮಾರು 1 ಸಾವಿರ ವಾಗಿದೆ. ಅಂತೆಯೇ ಪೆಟ್ರೋಲ್, ಡೀಸೆಲ್ ನ ದರವನ್ನೂ ಕೇಂದ್ರ ಸರ್ಕಾರ ಹೆಚ್ಚಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಬೆಲೆ ಏರಿಕೆಯನ್ನು ಹೋಲಿಸಿದರೆ, ರಾಜ್ಯದಲ್ಲಿ ಗಣನೀಯವಾಗಿ ಬೆಲೆಗಳು ಕಡಿಮೆಯಿದೆ. ಆದ್ದರಿಂದ ಕರ್ನಾಟಕದ ಹಣಕಾಸಿನ ಸ್ಥಿತಿ ಸುಭದ್ರವಾಗಿದ್ದು, ಬಿಜೆಪಿಯವರು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ ಎಂದರು.

ಪ್ರಧಾನಿ ಮೋದಿಯವರ ಅಧಿಕಾರಾವಧಿಯಲ್ಲಿ ಡಾಲರ್ ಬೆಲೆ ಹೆಚ್ಚುತ್ತಿದ್ದು, ರೂಪಾಯಿಯ ಮೌಲ್ಯ ಕುಸಿಯುತ್ತಿದೆ. ಅವರು ನೀಡಿದ ಭರವಸೆಗಳನ್ನು ಈಡೇರಿಸಲಿಲ್ಲ. ಅವರ ಅಚ್ಛೇ ದಿನಗಳು ಬರಲೇ ಇಲ್ಲ. ರೈತರ ಆದಾಯ ದುಪ್ಪಟ್ಟು, 2 ಕೋಟಿ ಉದ್ಯೋಗ, 15 ಲಕ್ಷ ಖಾತೆಗೆ ಹಣ ಎಂದಿದ್ದರೂ, ಒಂದು ಭರವಸೆಯನ್ನು ಈಡೇರಿಸಲಿಲ್ಲ ಎಂದರು.

ಬಿಜೆಪಿಯವರು ರಾಜ್ಯದಲ್ಲಿ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ, ದಾವಣಗೆರೆ, ಬಾಗಲಕೋಟೆಗೆ ಯಾವ ಕೊಡುಗೆಯನ್ನೂ ನೀಡಿಲ್ಲ. ನಮ್ಮ ಸರ್ಕಾರ ಮುಂದಿನ ದಿನಗಳಲ್ಲಿಯೂ ಇನ್ನೂ ಹೆಚ್ಚಿನ ಅನುದಾನವನ್ನು ಜಿಲ್ಲೆಗಳಿಗೆ ನೀಡಲಿದೆ. ಬಿಜೆಪಿಯವರ ಅಪಪ್ರಚಾರದ ನಡುವೆಯೂ ಹಿಂದೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭಾರಿ ಬಹುಮತವನ್ನು ಸಾಧಿಸಿತ್ತು. ಮಾಜಿ ಮುಖ್ಯಮಂತ್ರಿಗಳ ಪುತ್ರರು ನಿಂತಿದ್ದ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು ಎಂದರು.

ಕಾಂಗ್ರೆಸ್ ಪಕ್ಷ ಕುಟುಂಬ ರಾಜಕಾರಣ ಮಾಡುತ್ತಿದೆ ಎನ್ನುವ ಬಿಜೆಪಿಯವರ ಟೀಕೆಗೆ ಪ್ರತಿಕ್ರಿಯಿಸಿ, ಯಡಿಯೂರಪ್ಪ ಮತ್ತು ದೇವೇಗೌಡರ ಕುಟುಂಬಗಳನ್ನು ಉಲ್ಲೇಖಿಸಿ ಜೆಡಿಎಸ್ ಹಾಗೂ ಬಿಜೆಪಿಯವರು ಕುಟುಂಬ ರಾಜಕಾರಣದಲ್ಲಿ ಭಾಗಿಯಾಗಿದ್ದು, ಅವರ ಕುಟುಂಬದ ಸದಸ್ಯರು ರಾಜಕೀಯದಲ್ಲಿ ಸಕ್ರಿಯವಾಗಿರುವುದನ್ನು ಕಾಣಬಹುದು ಎಂದರು.

Tags:
error: Content is protected !!