ರಾಜ್ಯ

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನ

ರಾಹುಲ್ ಗಾಂಧಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ

ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಚರ್ಚೆಯಲ್ಲಿ ಭಾಗಿ

ಹೊಸದಿಲ್ಲಿ : ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳಿಗಾಗಿ ಮುಂದಾಗಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರೂ ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಅವರ ಪರವಾಗಿ ಧ್ವನಿ ಎತ್ತಿದ್ದರು.

ಇಂದು ರಾಹುಲ್ ಗಾಂಧಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಅವರು ಪಾಲ್ಗೊಂಡು ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದರು.

ಸಭೆ ಫಲಪ್ರದವಾಗಿದ್ದು “ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ” ಸ್ಥಾಪಿಸುವ ತೀರ್ಮಾನಕ್ಕೆ ಬರಲಾಗಿದೆ.

ಸಂಬಂಧಿತ ಸಂಸ್ಥೆಗಳಿಂದ ಶೇ5 ರಷ್ಟು ಸೆಸ್ ಸಂಗ್ರಹಿಸುವುದು ಮತ್ತು ಉಳಿದ ಅಗತ್ಯ ಹಣವನ್ನು ಸರ್ಕಾರವೇ ಭರಿಸಿ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಯೋಜನೆಗಳನ್ನು ರೂಪಿಸುವುದು, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.

 

ಸಭೆಯಲ್ಲಿ ಗಿಗ್ ಕಾರ್ಯಕರ್ತರು

ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮೂವರು ಸಚಿವರ ನೇತೃತ್ವದಲ್ಲಿ ನಡೆದ ಸಭೆಗೆ ಆಗಮಿಸಲು ಗಿಗ್ ಕಾರ್ಮಿಕರ ವಲಯದ ಪರವಾಗಿ ಮೂವರು ಕಾರ್ಯಕರ್ತರಿಗೂ ಅವಕಾಶ ಒದಗಿಸಲಾಗಿತ್ತು.

ರಾಜ್ಯದವರಾದ ರಕ್ಷಿತಾ ದೇವ್, ಹೈದ್ರಾಬಾದಿನ ಶೇಖ್ ಸಲಾಹುದ್ದೀನ್, ನಿಖಿಲ್ ದೇವ್ ಅವರು ಸಭೆಯಲ್ಲಿ ಭಾಗವಹಿಸಿದ್ದರು.

ಕಾರ್ಮಿಕ ಇಲಾಖೆ ಸಿದ್ದಪಡಿಸಿದ್ದ ಎಲ್ಲಾ ಎಂಟು ಅಂಶಗಳನ್ನೂ ರಾಹುಲ್ ಗಾಂಧಿ ಅವರು ಮೆಚ್ಚಿಕೊಂಡಿದ್ದಾರೆ.

ಮುಂದಿನ ಹಂತವಾಗಿ ಸಮಗ್ರ ಅಂಶಗಳನ್ನು ಒಳಗೊಂಡ ಮಸೂದೆಯನ್ನು ಸಂಪುಟದ ಮುಂದೆ ಮಂಡಿಸಲು ತೀರ್ಮಾನಿಸಲಾಗಿದೆ.
ಕಾರ್ಮಿಕ ಇಲಾಖೆ ಈಗಾಗಲೇ ಕಾರ್ಮಿಕರ ಗ್ರಾಚುಟಿ, ಸಿನಿಮಾ ಕಾರ್ಮಿಕರ ಬಿಲ್ ಸೇರಿ ಮೂರು ಪ್ರಮುಖ ಮಸೂದೆಗಳನ್ನ ಜಾರಿಗೆ ತಂದಿದ್ದು, ಈಗ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಕಾಯ್ದೆ ತರಲು ಮುಂದಾಗಿರುವುದಕ್ಕೆ ರಾಜ್ಯದ ಅಸಂಘಟಿತ ಕಾರ್ಮಿಕ ವಲಯ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದು, ಸರ್ಕಾರದ ಈ ಕಾಳಜಿಗೆ ಅಭಿನಂದಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು | ಡಿ.25ರಂದು ಮನುಸ್ಮೃತಿ ದಹನ ಕುರಿತು ವಿಚಾರ ಸಂಕಿರಣ

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿ ದಹಿಸಿದ 98 ನೇ ವರ್ಷದ ನೆಪದಲ್ಲಿ ಪ್ರಸ್ತುತ ಸಂವಿಧಾನ ವಿರೋಧಿ…

8 mins ago

ಹುಬ್ಬಳ್ಳಿ | ದಲಿತ ಯುವಕನ ಜೊತೆ ಮದುವೆ : ಗರ್ಭಿಣಿ ಮಗಳನ್ನ ಕೊಂದ ಪೋಷಕರು

ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ಮಗಳನ್ನು ಸ್ವಂತ ತಂದೆ ಸೇರಿ ಇತರರು ಕೊಲೆ ಮಾಡಿ ಗಂಡನ…

38 mins ago

ಡಿ.24ರಂದು ಮಹಾಸಭಾದಿಂದ ಶಾಮನೂರು ನುಡಿ ನಮನ: ಈಶ್ವರ ಖಂಡ್ರೆ

ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ…

2 hours ago

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಹೈಕೋರ್ಟ್‌ನಿಂದ ನೋಟಿಸ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ…

2 hours ago

6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ರಾಜೀನಾಮೆ ಕೊಟ್ಟ ವೈದ್ಯ

ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…

3 hours ago

ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್‌ ಸ್ಫೋಟಕ ಇಟ್ಟಿರುವುದಾಗಿ ಬೆದರಿಕೆ

ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ…

3 hours ago