ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ ಹೆಚ್ಚುವರಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಇಂದು ನಡೆಸ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪಡಿತರ ಚೀಟಿದಾರರಿಗೆ ನೀಡುತ್ತಿರುವ ಐದು ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ಸರ್ಕಾರ ನಿರ್ಧಾರ ಮಾಡಿದೆ.
ಇದು ಮುಂದಿನ ತಿಂಗಳಿನಿಂದ ಜಾರಿಯಾಗುವ ಸಾಧ್ಯತೆಯಿದ್ದು, ಆಹಾರದ ಕಿಟ್‌ನಲ್ಲಿ ಸಕ್ಕರೆ, ಉಪ್ಪು, ತೊಗರಿಬೇಳೆ, ಕಾಫಿಪುಡಿ, ಟೀಪುಡಿ, ಅಡುಗೆ ಎಣ್ಣೆ ಹಾಗೂ ಗೋಧಿ ಇರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.





