ರಾಯಚೂರು : ಮಂತ್ರಿಗಳ ನೇತೃತ್ವದಲ್ಲಿ ಗುತ್ತಿದಾರರು ಮತ್ತು ಇತರ ಮೂಲಗಳಿಂದ ಲೂಡಿ ಮಾಡಿ ಚುನಾವಣೆಗೆ ಹಣ ಸಂಗ್ರಹಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಶಾಸಕ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ರಾಯಚೂರಿನ ಲಿಂಗಸುಗೂರಿನಲ್ಲಿ ರಂಭಾಪುರಿ ಜಗದ್ಗುರುಗಳ ದಸರಾ ಶರನ್ನವರಾತ್ರಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಸರ್ಕಾರ ಅಧಿಕಾರಕ್ಕೆ ಬಂದು 5 ತಿಂಗಳು ಕಳೆದಿದೆ. ಆದರೆ ಈವರೆಗೆ ನಯಾ ಪೈಸೆ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಕಿಡಿ ಕಾರಿದ್ದಾರೆ.
ಎಲ್ಲರೂ ಗ್ಯಾರಂಟಿ ಕಡೆಗೆ ತೋರಿಸುತ್ತಿದ್ದಾರೆ. ವಿದ್ಯುತ್ ಸಮಸ್ಯೆಯಿಂದ ರೈತರು ಪರದಾಡುತ್ತಿದ್ದಾರೆ, ಬರಗಾಲ ಪರಸ್ಥಿತಿಯಿದೆ. ರಾಜ್ಯ ಸರ್ಕಾರ ಎಚ್ಚೆತ್ತು ಹೊರರಾಜ್ಯದಿಂದ ವಿದ್ಯುತ್ ಖರೀದಿ ಮಾಡಿ ರೈತರಿಗೆ ಸ್ಪಂದಿಸಬೇಕು. ಆದ್ರೆ ಇದು ರೈತರ ಬಗ್ಗೆ ಕಾಳಜಿಯಿಲ್ಲದ ಸರ್ಕಾರ, ಬರಗಾಲದಲ್ಲೂ ಅದೇ ರೀತಿ ಮುಂದುವರಿದಿರುವುದು ದುರದೃಷ್ಟ. ಬರಗಾಲದ ಸಂದರ್ಭದಲ್ಲೂ ಮಂತ್ರಿಗಳಿಗೆ ಹೊಸ ಕಾರು ಖರೀದಿ ಮಾಡುತ್ತಿದ್ದಾರೆ. ರಾಜ್ಯದ ಜನ ನರಳಾಡುತ್ತಿರುವಾಗ ಸರ್ಕಾರದ ಇಂತಹ ವರ್ತನೆ ಖಂಡನೀಯವಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿ ಕಾರ್ಯಕರ್ತರ ಶಕ್ತಿಯ ಮೇಲೆ ನಿಂತಿರುವ ಪಕ್ಷ. ಯಾರೋ ಒಬ್ಬರು ಇಬ್ಬರು ನಾಯಕರು ಪಕ್ಷ ಬಿಟ್ಟು ಹೋದರೆ ಹಿನ್ನಡೆಯಾಗಲ್ಲ. ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆಯಾಗಿದೆ, ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ಗೆಲ್ಲುವ ಮೂಲಕ ನರೇಂದ್ರ ಮೋದಿ ಕೈ ಬಲಪಡಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಐಟಿ ದಾಳಿಯಾದಾಗ ನೂರಾರು ಕೋಟಿ ರೂಪಾಯಿ ಹಣ ಸೀಜ್ ಮಾಡಿದ್ದಾರೆ. ಸಿಎಂ, ಡಿಸಿಎಂ ದಾಳಿಯನ್ನ ರಾಜಕೀಯ ಪ್ರೇರಿತ ಅಂತ ಹೇಳಿದ್ದಾರೆ. ಇದು ಸಿಎಂ ಸ್ವಾಗತ ಮಾಡಬೇಕಾದ ವಿಚಾರ. ಒಂದು ಕಡೆ ಕೊಳ್ಳೆಹೊಡೆಯುತ್ತಿರುವಂತ ಸರ್ಕಾರ ಇದು ಅಂತ ಜನರೇ ಮಾತನಾಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಸತ್ಯ ಹೊರಬರಲಿದೆ ಎಂದು ಹೇಳಿದ್ದಾರೆ.
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…
ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…
ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…