It’s been two and a half years without grants for MLAs: MP Basavaraj Bommai mocks
ಬೆಂಗಳೂರು: ಜಿ ರಾಮ್ ಜಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಸುಳ್ಳು ಅಂಶಗಳನ್ನು ಹೇಳುವ ಮೂಲಕ ರಾಜ್ಯದ ಬಡವರ ಕೂಲಿಕಾರರ ದಾರಿ ತಪ್ಪಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಿಂದಿನ ನರೇಗಾ ಯೋಜನೆಯಲ್ಲಿ ಪ್ರತಿ ವರ್ಷ ನೂರು ದಿನಗಳ ಉದ್ಯೋಗ ಖಾತ್ರಿ ಇತ್ತು. ಈಗ 125 ದಿನಗಳಿಗೆ ಹೆಚ್ಚಿಸಲಾಗಿದೆ. ಈ 125 ದಿನಗಳನ್ನು ಗ್ರಾಮ ಪಂಚಾಯತಿಗಳೇ ನಿರ್ಧಾರ ಮಾಡಬಹುದು. ಆದರೆ, ಕೇಂದ್ರ ಸರ್ಕಾರ ನಿರ್ಧಾರ ಮಾಡುತ್ತದೆ ಎಂಬ ಭೀತಿಯನ್ನು ಕಾರ್ಮಿಕರಲ್ಲಿ ಹುಟ್ಟಿಸುತ್ತಿದೆ ಎಂದು ಟೀಕಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳಿಗೆ ಮತ್ತು ರೈತರಿಗೆ ಅನುಕೂಲಕ್ಕಾಗಿ ವರ್ಷದಲ್ಲಿ ಎರಡು ಬಾರಿ ಉದ್ಯೋಗ ಖಾತ್ರಿಯ ಕೆಲಸಗಳನ್ನು ಕೃಷಿಗೋಸ್ಕರ ನೀಡಲಾಗಿದೆ. ಇದನ್ನು ರಾಜ್ಯ ಸರ್ಕಾರ ಆಕ್ಷೇಪ ಮಾಡುವ ಮುಖಾಂತರ ರೈತ ವಿರೋಧಿ ಕೃಷಿ ವಿರೋಧಿ ನೀತಿ ಅನುಸರಿಸುತ್ತಿದೆ. ಇದು ಇಡೀ ದೇಶದ ರೈತರ ಬೇಡಿಕೆಗೆ ಅನುಗುಣವಾಗಿದೆ. ಅಲ್ಲದೇ ವರ್ಷದಲ್ಲಿ 125 ದಿನ ಬಿಟ್ಟರೆ ಬೇರೆ ದಿನದಲ್ಲಿ ಬೇರೆ ರಂಗದಲ್ಲಿ ಕೆಲಸ ಮಾಡುವುದು ಅನಿವಾರ್ಯವಿದೆ ಎಂದಿದ್ದಾರೆ.
ಜಿ ರಾಮ್ ಜಿ ಯೋಜನೆಯಲ್ಲಿ ಒಂದು ವಾರದಿಂದ ಹದಿನೈದು ದಿನಗಳ ಒಳಗೆ ಕಡ್ಡಾಯವಾಗಿ ಕಾರ್ಮಿಕರ ವೇತನ ಕೊಡುವ ಬಗ್ಗೆ ಸ್ಪಷ್ಟವಾಗಿದೆ. ಆದಾಗ್ಯೂ ರಾಜ್ಯ ಸರ್ಕಾರ ಅನುದಾನ ಸಿಗದೇ ಇರುವ ವಿಚಾರವನ್ನು ಹೇಳಿ ಕಾರ್ಮಿಕರಿಗೆ ಈ ಯೋಜನೆಯಿಂದ ದೂರ ಮಾಡುತ್ತಿದೆ.
ನರೇಗಾ ಯೋಜನೆಯಲ್ಲಿ ಹಲವಾರು ಪ್ರಕರಣಗಳು ಭ್ರಷ್ಟಾಚಾರದಿಂದ ಕೂಡಿರುವುದು ಯೋಜನೆಯ ದುರ್ಬಳಕೆ ಆಗಿರುವುದು. ಸುಳ್ಳು ಕೂಲಿಕಾರರ ಹೆಸರು ಹೇಳಿ ವೇತನ ತೆಗೆದಿರುವ ಲೋಪ ಇದ್ದು, ಅದನ್ನು ಸರಿಪಡಿಸಲು ಬಯೊಮೆಟ್ರಿಕ್ ತಂತ್ರಜ್ಞಾನ ಬಳಸಿ ಸೋರಿಕೆ ತಡೆಗಟ್ಟಲು ಯೋಜನೆ ಮಾಡಿದರೆ ಇದರಿಂದ ವಂಚನೆ ಆಗುತ್ತದೆ ಎಂಬ ತಪ್ಪು ಮಾಹಿತಿಯನ್ನು ರಾಜ್ಯ ಸರ್ಕಾರ ಹೇಳುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರ ಶೇ.60:40 ಅನುಪಾತದಲ್ಲಿ ಹಂಚಿಕೊಳ್ಳುವ ನಿರ್ಧಾರದಿಂದ ಹೆಚ್ಚು ದಿನ ಹೆಚ್ಚು ಜನರಿಗೆ ಉದ್ಯೋಗ ಕೊಡಲು ಮತ್ತು ರಾಜ್ಯ ಸರ್ಕಾರಗಳು ದುಂದು ವೆಚ್ಚ , ಅನುಪಯುಕ್ತ ವೆಚ್ಚ, ಭ್ರಷ್ಟಾಚಾರ ಕಡಿಮೆ ಮಾಡಿ ರೈತ ಕೂಲಿಕಾರರಿಗೆ ಸಹಾಯ ಮಾಡುವ ಚಿಂತನೆ ಮಾಡಬೇಕಿದೆ. ಅದನ್ನು ಮಾಡದೇ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಎಲ್ಲ ಮೇಲಿನ ಅಂಶಗಳಿಂದ 125 ದಿವಸ ಉದ್ಯೋಗ ಕೊಡುವುದರಿಂದ ಗ್ರಾಮೀಣ ಪ್ರದೇಶದ ನಿರುದ್ಯೊ?ಗ ಸಮಸ್ಯೆಯನ್ನು ನಿವಾರಣೆ ಮಾಡಲು ಸಾಧ್ಯವಾಗುತ್ತದೆ. ಈ ಯೋಜನೆಯಲ್ಲಿದ್ದ ಭ್ರಷ್ಟಾಚಾರ ಸಂಪೂರ್ಣ ನಿವಾರಣೆ ಆಗುತ್ತದೆ. ಹಾಗೂ ಬಡವರು, ಕಾರ್ಮಿಕರು, ದೀನ -ದಲಿತರಿಗೆ ನ್ಯಾಯ ಸಮತ ಕೆಲಸ ಮತ್ತು ಕೂಡಲೇ ವೇತನ ಸಿಗುವ ವ್ಯವಸ್ಥೆ ಆಗುತ್ತದೆ. ಪಂಚಾಯತಿಗಳು ಯೋಜನೆಯನ್ನು ರೂಪಿಸುವ, ಅನುಷ್ಠಾನ ಮಾಡುವ ಸರ್ವ ಸ್ವತಂತ್ರ ಹೊಂದುತ್ತವೆ. ರಾಜ್ಯ ಸರ್ಕಾರದ ಮಧ್ಯ ಪ್ರವೇಶದಿಂದ ಮುಕ್ತವಾಗುತ್ತವೆ ಎಂದು ಅವರು ತಿಳಿಸಿದ್ದಾರೆ.
ಗ್ರಾಮೀಣ ಅವಶ್ಯಕತೆಗೆ ತಕ್ಕಂತೆ ಆಸ್ತಿಗಳ ನಿರ್ಮಾಣ ಆಗುತ್ತದೆ. ಇದರಿಂದ ವಿಕಸಿತ ಭಾರತದ ಗುರಿಗೆ ಗ್ರಾಮೀಣ ಪ್ರದೇಶದ ಬದುಕು ಮತ್ತು ಸಾಧನೆ ಆಗುವ ಕಲ್ಪನೆಯಿಂದ ಈ ಯೋಜನೆಯನ್ನು ಕೇಂದ್ರ ಸರ್ಕಾರ ತಂದಿದೆ. ನಾನು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಹಾಸನ: ರಾಕಿಂಗ್ ಸ್ಟಾರ್ ಯಶ್‌ಗೆ ಭೂ ಒತ್ತುವರಿ ತೆರವು ಶಾಕ್ ನೀಡಲಾಗಿದೆ. ಹಾಸನದಲ್ಲಿರುವ ಲಕ್ಷ್ಮಮ್ಮ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ…
ಮೈಸೂರು ನಗರದ ಕುವೆಂಪು ನಗರದ ವಿವೇಕಾನಂದ ವೃತ್ತದಿಂದ ಶ್ರೀರಾಂಪುರದ ಕಡೆಗೆ ಹೋಗುವ ಮುಖ್ಯ ರಸ್ತೆಯಲ್ಲಿ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ…
ರಾಜ್ಯದ ವಿವಿಧ ಭಾಗಗಳಲ್ಲಿ ರಾಗಿ, ಭತ್ತ, ಜೋಳ ಮೊದಲಾದ ಫಸಲನ್ನು ಒಕ್ಕಣೆ ಮಾಡಲು ರಸ್ತೆಯನ್ನೇ ಬಳಸುತ್ತಿದ್ದು, ಇದರಿಂದ ಅಪಘಾತಗಳು ಸಂಭವಿಸಿ…
ಮೈಸೂರು ವಿಭಾಗದಲ್ಲಿ ಹುಲಿ ಚಿರತೆಗಳ ದಾಳಿಯಿಂದಾಗಿ ಹಲವಾರು ಮಂದಿ ಸಾವನ್ನಪ್ಪಿದ್ದರು. ಮಾನವ-ಪ್ರಾಣಿ ಸಂಘರ್ಷವನ್ನು ತಪ್ಪಿಸುವಂತೆ ರೈತ ಸಂಘ ಹಾಗೂ ಗ್ರಾಮಸ್ಥರು…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಕಳೆದ ವರ್ಷ ೨೦೨೫ರಲ್ಲಿ ಮಹಾರಾಷ್ಟ್ರ, ಹರಿಯಾಣ ಮತ್ತು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ…
ನವೀನ್ ಡಿಸೋಜ ಅನುದಾನ ಬಿಡುಗಡೆಯಾದರೂ ಆರಂಭವಾಗದ ಕಾಮಗಾರಿ ಶೀಘ್ರ ಸೇತುವೆ ನಿರ್ಮಾಣಕ್ಕೆ ಒತ್ತಾಯ ಮಡಿಕೇರಿ: ಕುಶಾಲನಗರ ತಾಲ್ಲೂಕಿನ ದುಬಾರೆ ತೂಗು…