ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೆಲೆ ಏರಿಕೆ ನಿರಂತರವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೆಟ್ರೋ, ಹಾಲು, ಬಸ್, ವಿದ್ಯುತ್ ದರ ಸೇರಿದಂತೆ ಅನೇಕ ಬೆಲೆಗಳು ಏರಿಕೆಯಾಗಿದೆ. ಆದರೂ ರಾಜ್ಯ ಸರ್ಕಾರ ತಲೆಕೆಡಿಸಿಕೊಂಡಿಲ್ಲ. ಗಾಳಿ ಬಿಟ್ಟರೆ ಬೇರೆ ಎಲ್ಲಾ ದರಗಳು ಏರಿಕೆಯಾಗಿವೆ. ಬೆಲೆ ಏರಿಕೆಯಿಂದ ಜನತೆ ಕಂಗಾಲಾಗಿದ್ದಾರೆ ಎಂದು ಕಿಡಿಕಾರಿದರು.
ಇನ್ನು ಬೆಲೆ ಏರಿಕೆ ವಿರುದ್ಧ ಏಪ್ರಿಲ್.2ರಂದು ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಲಿದೆ. ಏಪ್ರಿಲ್.5ರಂದು ಜಿಲ್ಲಾ ಮಟ್ಟದಲ್ಲಿ ಹೋರಾಟ ಆರಂಭಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.