ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೆಲೆ ಏರಿಕೆ ನಿರಂತರವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೆಟ್ರೋ, ಹಾಲು, ಬಸ್, ವಿದ್ಯುತ್ ದರ ಸೇರಿದಂತೆ ಅನೇಕ ಬೆಲೆಗಳು ಏರಿಕೆಯಾಗಿದೆ. ಆದರೂ ರಾಜ್ಯ ಸರ್ಕಾರ ತಲೆಕೆಡಿಸಿಕೊಂಡಿಲ್ಲ. ಗಾಳಿ ಬಿಟ್ಟರೆ ಬೇರೆ ಎಲ್ಲಾ ದರಗಳು ಏರಿಕೆಯಾಗಿವೆ. ಬೆಲೆ ಏರಿಕೆಯಿಂದ ಜನತೆ ಕಂಗಾಲಾಗಿದ್ದಾರೆ ಎಂದು ಕಿಡಿಕಾರಿದರು.
ಇನ್ನು ಬೆಲೆ ಏರಿಕೆ ವಿರುದ್ಧ ಏಪ್ರಿಲ್.2ರಂದು ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಲಿದೆ. ಏಪ್ರಿಲ್.5ರಂದು ಜಿಲ್ಲಾ ಮಟ್ಟದಲ್ಲಿ ಹೋರಾಟ ಆರಂಭಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಬೆಳಗಾವಿ: ಜನರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿ ಅರಿಯಲು ಜಾತಿಗಣತಿ ಅಗತ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನ…
ಬೆಳಗಾವಿ: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರಿಗೆ ನಮ್ಮನ್ನು ಪ್ರಶ್ನಿಸುವ ನೈತಿಕತೆ ಇಲ್ಲ…
ಹನೂರು: ತಾಲೂಕಿನ ಪ್ರಸಿದ್ದ ಧಾರ್ಮಿಕ ಸ್ಥಳವಾದ ಮಲೆಮಹದೇಶ್ವರ ಬೆಟ್ಟದ ಮಲೆಮಹದೇಶ್ವರ ಸ್ವಾಮಿ ದೇವಾಲಯದ ಗೋಪುರದ ಮೇಲೆ ಏರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ “ಭೀಮ ಸಂಭ್ರಮ ಕಪ್ ಸೀಜನ್- 05” ಕ್ರಿಕೆಟ್ ಪಂದ್ಯಾವಳಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ್ದ…
ಬೇರೆ ಭಾಷೆಗಳಿಗೆ ಹೋಲಿಸಿದರೆ ಕನ್ನಡದಲ್ಲಿ ವೆಬ್ ಸರಣಿಗಳ ಸಂಖ್ಯೆ ಕಡಿಮೆಯೇ. ಅಪರೂಪಕ್ಕೆಂಬಂತೆ ಅಲ್ಲೊಂದು ಇಲ್ಲೊಂದು ವೆಬ್ ಸರಣಿಗಳು ಕನ್ನಡದಲ್ಲಿ ನಿರ್ಮಾಣವಾಗುತ್ತಿವೆ.…
ಕೊಳ್ಳೇಗಾಲ: ಸಿಡಿಮದ್ದು ಹಾಕಿ ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ದೊಡ್ಡಿಂದುವಾಡಿ ಗ್ರಾಮದ ಸುಂದರ್…