by vijayendra
ಬೆಂಗಳೂರು: ಕೇರಳ ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮೊದಲ ಭಾಷೆಯಾಗಿ ಮಲೆಯಾಳಂ ಕಡ್ಡಾಯ ಕಲಿಕೆ ಮಸೂದೆ ಜಾರಿಗೆ ಮುಂದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಮಲೆಯಾಳಂ ಕಡ್ಡಾಯ ಮಾಡದಂತೆ ತಿಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಕೇರಳ ಸಿಎಂಗೆ ಪತ್ರ ಬರೆದರೆ ಸಾಲದು. ರಾಜ್ಯ ಸರ್ಕಾರ ವೇಣುಗೋಪಾಲ್‌ಗೆ ಕಿವಿ ಹಿಂಡಬೇಕು. ಮಲೆಯಾಳಂ ಭಾಷೆ ಕಡ್ಡಾಯ ಮಾಡದಂತೆ ನೋಡಿಕೊಳ್ಳಿ ಎಂದು ಆಗ್ರಹಿಸಿದರು.
ದ್ವೇಷ ಭಾಷಣ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸದನದಲ್ಲಿ ಚರ್ಚೆ ಮಾಡದೇ ಬಿಲ್ ಅಂಗೀಕಾರ ಮಾಡಿದ್ದರು. ಸರ್ಕಾರ ಹಿಂಬಾಗಿಲ ಮೂಲಕ ಮಸೂದೆ ಅಂಗೀಕಾರ ಮಾಡಿಕೊಂಡಿತ್ತು. ಯಾವುದೇ ಚರ್ಚೆಗೆ ಅವಕಾಶ ನೀಡಿರಲಿಲ್ಲ. ಈ ಮಸೂದೆ ಬಗ್ಗೆ ಸಾಕಷ್ಟು ಆಕ್ಷೇಪವಿದೆ. ಮಸೂದೆ ಮೂಲಕ ತುರ್ತು ಪರಿಸ್ಥಿತಿ ಹೇರಲು ಹೊರಟಿದ್ದಾರೆ. ರಾಜ್ಯದ ಪ್ರತಿಯೊಬ್ಬರು ಈ ಮಸೂದೆಯನ್ನು ವಿರೋಧ ಮಾಡುತ್ತಿದ್ದಾರೆ. ಈ ಕಾರಣಕ್ಕೆ ರಾಜ್ಯಪಾಲರು ತಡೆ ಹಿಡಿದಿರಬಹುದು ಎಂದು ಹೇಳಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…