ಬೆಂಗಳೂರು: 6 ರಿಂದ 14 ವರ್ಷದ ಮಕ್ಕಳು 8 ವರ್ಷದ ಶಿಕ್ಷಣ ಪಡೆಯುವುದು ಕಡ್ಡಾಯ. ಹೀಗಾಗಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.
ಈ ಬಗ್ಗೆ ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಸುತ್ತೋಲೆ ಹೊರಡಿಸಿದೆ.
ಶಾಲೆಯಿಂದ ಹೊರಗುಳಿದ ಮಕ್ಕಳ ಮನೆಗೆ ಭೇಟಿ ನೀಡಿ ಮೊಬೈಲ್ ಮೂಲಕ ಸಮೀಕ್ಷೆ ಮಾಡಲಾಗುತ್ತದೆ. ಆ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ರೋಜನೆ ರೂಪಿಸಿದ್ದು, ಎಲ್ಲಾ ಮಕ್ಕಳು ಶಿಕ್ಷಣ ಕಲಿಯಬೇಕು ಎಂಬ ಆಶಯದಂತೆ ಈ ನಿರ್ಧಾರ ಮಾಡಲಾಗಿದೆ.
ಈ ಬಗ್ಗೆ ಸೂಚನೆ ನೀಡಿರುವ ಪಂಚಾಯತ್ ರಾಜ್ ಇಲಾಖೆಯು ಗ್ರಾಮ ಪಂಚಾಯತ್‌ಗಳು ಮನೆ ಮನೆ ಸಮೀಕ್ಷೆ ನಡೆಸಬೇಕು. ಜುಲೈ.31ರೊಳಗೆ ಸಮೀಕ್ಷೆ ನಡೆಸಿ ಸಂಪೂರ್ಣ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ.
ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು, ಗಣತಿದಾರರಿಗೆ ಗ್ರಾಮ ಪಂಚಾಯಿತಿಯಲ್ಲಿ ತರಬೇತಿ ನೀಡಬೇಕು. ತರಬೇತಿಯಲ್ಲಿ ಶಾಲೆಯ ಶಿಕ್ಷಕರು ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿಗಳನ್ನು ತೊಡಗಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಈ ಮೂಲಕ ರಾಜ್ಯ ಸರ್ಕಾರ ಶಿಕ್ಷಣದಿಂದ ವಂಚಿತರಾಗಿರುವ ಮಕ್ಕಳನ್ನು ಮುಖ್ಯವಾಹಿನಿಗೆ ತಂದು ಅವರಿಗೂ ಶಿಕ್ಷಣ ನೀಡುವತ್ತ ದಿಟ್ಟ ಹೆಜ್ಜೆ ಇಟ್ಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನಡೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…