Mysore
20
clear sky

Social Media

ಬುಧವಾರ, 18 ಮಾರ್ಚ್ 2026
Light
Dark

ಔಷಧ ಮಾದರಿ ಪರೀಕ್ಷೆಯಲ್ಲಿ ರಾಜ್ಯ ನಂಬರ್‌ ಒನ್‌ ಇದೆ: ಸಚಿವ ದಿನೇಶ್‌ ಗುಂಡೂರಾವ್‌

dinesh gundurao

ಹಾಸನ: ಮಧ್ಯಪ್ರದೇಶ ಸಿರಪ್‌ ದುರಂತ ಪ್ರಕರಣದ ಬಳಿಕ ನಮ್ಮ ರಾಜ್ಯದಲ್ಲೂ ಈ ಬಗ್ಗೆ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಈ ಕುರಿತು ಹಾಸನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಔಷಧ ಮಾದರಿ ಪರೀಕ್ಷೆಯಲ್ಲಿ ರಾಜ್ಯ ನಂಬರ್‌ ಒನ್‌ ಇದೆ. ಈ ಕಾಫ್‌ ಸಿರಪ್‌ ನಮ್ಮ ರಾಜ್ಯದಲ್ಲಿ ಸರಬರಾಜು ಆಗಿಲ್ಲ ಎಂದು ಸ್ಪಷ್ಟನೆ ನೀಡಿದರು.

ಇನ್ನು ಮಕ್ಕಳಿಗೆ ಔಷಧ ಕೊಡುವಾಗ ಎಚ್ಚರಿಕೆ ವಹಿಸಬೇಕು. ಮಧ್ಯಪ್ರದೇಶದ ಘಟನೆ ಅತ್ಯಂತ ಆಘಾತಕಾರಿ. ರಾಜ್ಯದಲ್ಲಿ ನಮ್ಮ ಸರ್ಕಾರ ಬಂದ ಬಳಿಕ ಆಹಾರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಜನರಿಗೆ ಆಹಾರ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಬಗ್ಗೆ ಕ್ರಮ ವಹಿಸಲಾಗಿದೆ ಎಂದರು.

Tags:
error: Content is protected !!