ಬೆಂಗಳೂರು: ಕಳೆದ ಫೆಬ್ರವರಿ ತಿಂಗಳಿನಿಂದ ರಾಜ್ಯದಲ್ಲಿ ಬಿಸಿಲಿನ ಆರ್ಭಟ ಹೆಚ್ಚಾಗಿದ್ದು, ಜನತೆ ಬಿಸಿಗಾಳಿಯಿಂದ ತತ್ತರಿಸಿ ಹೋಗಿದ್ದಾರೆ.
ಈ ಬೆನ್ನಲ್ಲೇ ಹವಾಮಾನ ಇಲಾಖೆ ಮತ್ತೊಂದು ಎಚ್ಚರಿಕೆ ನೀಡಿದ್ದು, ಏಪ್ರಿಲ್ ಅಂತ್ಯದವರೆಗೂ ಬಿಸಿಲು ಮತ್ತಷ್ಟು ಹೆಚ್ಚಾಗಲಿದೆ ಎಂದು ಮಾಹಿತಿ ನೀಡಿದೆ.
ಉತ್ತರ ಕರ್ನಾಟಕ ಭಾಗದಲ್ಲಂತೂ ಬೇಸಿಗೆ ಬಿರುಬಿಸಿಲಿಗೆ ಜನ ಬಸವಳಿದು ಹೋಗಿದ್ದಾರೆ. ಕಾರವಾರ, ಕಲಬುರ್ಗಿ, ರಾಯಚೂರು, ಬೀದರ್ ಭಾಗದಲ್ಲಿ ಈ ಬಾರಿ ಬಿಸಿಲು ದಾಖಲೆಯನ್ನೇ ಮುಟ್ಟಿದೆ.
ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಕೂಡ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗುತ್ತಿದ್ದು, ಜನತೆ ತಂಪು ಪಾನೀಯಗಳ ಮೊರೆ ಹೋಗಿದ್ದಾರೆ.
ಇನ್ನು ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಜನರಿಗೆ ಎಚ್ಚರಿಕೆ ನೀಡಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಜನತೆಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ.





