ಸುತ್ತೂರು ಜಾತ್ರೆ ರದ್ದು; ಸಾಂಕೇತಿಕ ಕಾರ್ಯಕ್ರಮಕ್ಕೆ ಸೀಮಿತ

ಮೈಸೂರು: ನಂಜನಗೂಡು ತಾಲ್ಲೂಕು ಸುತ್ತೂರು ಕ್ಷೇತ್ರದಲ್ಲಿ ಜ.28ರಿಂದ ಫೆ.2ರವರೆಗೆ ನಡೆಯಬೇಕಿದ್ದ ಶ್ರೀ ಶಿವರಾತ್ರೀಶ್ವರ ಶಿವೋಂಗಿಗಳವರ ಜಾತ್ರಾ ಮಹೋತ್ಸವವನ್ನು ಸರ್ಕಾರದ ಮಾರ್ಗಸೂಚಿಯಂತೆ ರದ್ದುಪಡಿಸಲಾಗಿದೆ.

ಕೋವಿಡ್-19ರ ರೂಪಾಂತರಿ ಓಮಿಕ್ರಾನ್ ಸೋಂಕು ವ್ಯಾಪಕವಾಗಿ ಹಬ್ಬುತ್ತಿದೆ. ಸರ್ಕಾರ ರಾತ್ರಿ ವೇಳೆ ಹಾಗೂ ವಾರಾಂತ್ಯಗಳಲ್ಲಿ ಕರ್ಫ್ಯೂ ಘೋಷಿಸಿದೆ. ಸೋಂಕು ಮತ್ತಷ್ಟು ಉಲ್ಬಣಿಸಿದರೆ ನಿರ್ಬಂಧಗಳು ಮತ್ತಷ್ಟು ಕಠಿಣಗೊಳ್ಳಲಿವೆ. ಸಾರ್ವಜನಿಕ ಹಿತದೃಷ್ಟಿಯಿಂದ ಈ ಬಾರಿಯ ಜಾತ್ರೆಯನ್ನು ಪೂರ್ಣವಾಗಿ ರದ್ದುಪಡಿಸಲಾಗಿದೆ. ರಥೋತ್ಸವ, ತೆಪ್ಪೋತ್ಸವ, ಸಾಮೂಹಿಕ ವಿವಾಹ, ವಸ್ತುಪ್ರದರ್ಶನ, ಕೃಷಿಮೇಳ, ಕುಸ್ತಿ ಪಂದ್ಯಾವಳಿ, ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಅಂಗಡಿ ಮುಂಗಟ್ಟುಗಳು ಇತ್ಯಾದಿ ಯಾವುವೂ ಇರುವುದಿಲ್ಲ. ಸಾಂಪ್ರದಾಯಿಕ ಧಾರ್ಮಿಕ ಆಚರಣೆಗಳನ್ನು ಸಾಂಕೇತಿಕವಾಗಿ ಒಂದೇ ದಿವಸಕ್ಕೆ ಸೀಮಿತಗೊಳಿಸಲಾಗಿದೆ.

ಈ ಕಾರಣಗಳಿಂದಾಗಿ ಸೇವಾರ್ಥದಾರರು ಹಾಗೂ ಸಾರ್ವಜನಿಕರು ಯಾರಿಗೂ ಶ್ರೀ ಕ್ಷೇತ್ರಕ್ಕೆ ಪ್ರವೇಶವಿರುವುದಿಲ್ಲ. ಸಾಂಪ್ರದಾಯಿಕವಾಗಿ – ಸಾಂಕೇತಿಕವಾಗಿ ಜ.೨೯ರಂದು ಸಂಜೆ ಹಾಗೂ ಜ.30ರಂದು ನಡೆಯುವ ಧಾರ್ಮಿಕ ಆಚರಣೆಗಳನ್ನು ಆನ್‌ಲೈನ್‌ನಲ್ಲಿ http://Youtube.com/c/JSSMahavidyapeethaonline, https://www.facebook.com/JSSMVP ಲಿಂಕ್‌ಗಳ ಮೂಲಕ ವೀಕ್ಷಿಸಬಹುದಾಗಿದೆ ಎಂದು ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಎಸ್.ಶಿವಕುಮಾರ್ ತಿಳಿಸಿದ್ದಾರೆ.

 

× Chat with us