ಪಿರಿಯಾಪಟ್ಟಣ: ಮಹಿಳೆಯರು ಇವತ್ತು ಕಟ್ಟುಪಾಡುಗಳನ್ನು ಒಡೆದು ಮುಂದೆ ಸಾಗುತ್ತಿದ್ದಾರೆ. ಸ್ವಾಭಿಮಾನದ ಜೀವನ ಕಂಡುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಪಿರಿಯಾಪಟ್ಟಣ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಹಾಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.
ಮೊದಲು ಮಹಿಳೆಯರಿಗೆ ಎಷ್ಟು ಕಷ್ಟವಿತ್ತು. ಗಂಡಸರನ್ನು ಮಾತನಾಡಿಸುವಾಗ ಹೆಂಗಸರು ತಲೆ ಬಗ್ಗಿಸಿ ಮಾತನಾಡಬೇಕಿತ್ತು. ತಲೆಯ ಮೇಲೆ ಸೆರಗು ಮುಚ್ಚಿಕೊಳ್ಳಬೇಕಿತ್ತು. ಮೌನಕ್ಕೆ ಶರಣಾಗಬೇಕಿತ್ತು, ಸ್ವಾಭಿಮಾನ ಹತ್ತಿಕ್ಕಿಕೊಳ್ಳಬೇಕಿತ್ತು. ಆದರೆ ಇಂದು ಪರಿಸ್ಥಿತಿ ಬದಲಾಗಿದೆ. ಮಹಿಳೆಯನ್ನು ದುರ್ಬಲ ಎಂದು ನೋಡುವ ಕಾಲ ಮುಗಿದಿದೆ. ಮಹಿಳೆಯನ್ನು ನಿರ್ಧಾರ ಮಾಡುವ ಶಕ್ತಿಯಾಗಿ ಗುರುತಿಸುವ ಕಾಲ ಬಂದಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಗೃಹಲಕ್ಷ್ಮೀ ಯೋಜನೆಯನ್ನು ಹಕ್ಕಿನಿಂದ ತೆಗೆದುಕೊಂಡು, ಶಕ್ತಿ ಯೋಜನೆಯಲ್ಲಿ ಬಹಳ ಸ್ವಾಭಿಮಾನದಿಂದ ಪ್ರಯಾಣ ಮಾಡುತ್ತಿದ್ದಾಳೆ. ಒಬ್ಬ ಮಹಿಳಾ ಮಂತ್ರಿಯಾಗಿ ಇದಕ್ಕಿಂತ ಸಂತೋಷ ಇನ್ನೊಂದಿಲ್ಲ. ನಾನು ರಾಣಿ ಚನ್ನಮ್ಮನ ವಂಶಸ್ಥೆ, 300 ವರ್ಷ ನಮ್ಮನ್ನು ಆಳಿದ ಬ್ರಿಟಿಷರ ವಿರುದ್ಧ ಟೊಂಕಕಟ್ಟಿ ಹೋರಾಡಿದ ಮಹಿಳೆ ನಮ್ಮ ಕಿತ್ತೂರು ರಾಣಿ ಚನ್ನಮ್ಮ. ದೊಡ್ಡ ದೊಡ್ಡ ಮಹಾರಾಜರು ಬ್ರಿಟಿಷರ ವಿರುದ್ಧ ಹೋರಾಡಲಿಲ್ಲ. ಸ್ವಾಭಿಮಾನಿ ಮಹಿಳೆ ಕಿತ್ತೂರು ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಡಿದ ಧೀರ ಮಹಿಳೆ. ಇದರರ್ಥ ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಮಾನವನ ಕರ್ತವ್ಯ ಎಂದರು.
ನಮ್ಮ ಮಕ್ಕಳೇ ಮುಂದಿನ ಭವಿಷ್ಯ, ಸುಮ್ಮನಿರು ಎನ್ನುವುದನ್ನು ಬಿಟ್ಟು ಮಾತನಾಡು ಎಂದು ನಾವು ಮಗಳಿಗೆ ಹೇಳಿಕೊಡಬೇಕು. ಕೇವಲ ವಿದ್ಯಾಭ್ಯಾಸ ಕಲಿಸದೇ ಸ್ವಂತ ಕಾಲಮೇಲೆ ನಿಲ್ಲುವಂತೆ ನಿಮ್ಮ ಮಕ್ಕಳನ್ನು ರೂಪಿಸಿ, ಸ್ವಾಭಿಮಾನದ ಪಾಠವನ್ನು ಕಲಿಸಬೇಕು, ಬೇರೆಯವರಿಗೆ ಗೌರವ ಕೊಡುವುದರ ಜೊತೆಗೆ ನಿನಗೆ ನೀನು ಗೌರವ ಕೊಡುವುದನ್ನು ಕಲಿ ಎಂಬುದನ್ನು ಕಲಿಸಿ ಎಂದು ಹೇಳಿದರು.
ನಾವು ಆರ್ಥಿಕವಾಗಿ ಸಬಲೀಕರಣಗೊಂಡರೆ ಬೇರೆಯವರು ನಮಗೆ ಮರ್ಯಾದೆಯನ್ನು ಕೊಡುತ್ತಾರೆ. ಹೀಗಾಗಿ ಮಹಿಳೆಯರು ಆರ್ಥಿಕವಾಗಿ ಸದೃಢರಾಗಬೇಕು. ಇದು ನಮಗೆ ಸ್ವಾಭಿಮಾನದ ಪ್ರಶ್ನೆ ಎಂದು ಹೇಳಿದರು.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…