Categories: ರಾಜ್ಯ

ರೈತರ ಭೂಮಿಯನ್ನು ಕಬಳಿಕೆ ಮಾಡುತ್ತಿರುವ ವಕ್ಫ್‌ ಮಂಡಳಿ ರದ್ದಾಗಬೇಕು: ವಿಪಕ್ಷ ನಾಯಕ ಆರ್‌.ಅಶೋಕ್‌ ಒತ್ತಾಯ

ಬೆಂಗಳೂರು: ರೈತರ ಭೂಮಿಯನ್ನು ಕಬಳಿಕೆ ಮಾಡುತ್ತಿರುವ ವಕ್ಫ್‌ ಮಂಡಳಿ ರದ್ದಾಗಬೇಕು ಹಾಗೂ ರೈತರ ಜಮೀನಿನ ಪಹಣಿಯಲ್ಲಿ ದಾಖಲೆಯಾಗಿರುವ ವಕ್ಫ್‌ ಹೆಸರು ತೆಗೆಯಬೇಕು ಎಂದು ಸರ್ಕಾರಕ್ಕೆ ಆರ್‌.ಅಶೋಕ್‌ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ನ.22) ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂದಿನ ಕಾಲದ ಯುಪಿಎ ಸರ್ಕಾರಕ್ಕೆ ವಕ್ಫ್‌ ಮಂಡಳಿ ಸ್ಥಾಪಿಸುವಂತೆ ಅಧಿಕಾರ ನಡೆಸುವಂತೆ ನ್ಯಾಯಾಂಗ ಅಧಿಕಾರ ನೀಡಿತ್ತು. ಅದನ್ನೇ ಇಂದು ರಾಜ್ಯ ಸರ್ಕಾರ ಬಳಸಿಕೊಂಡು ವಕ್ಫ್‌ ಮಂಡಳಿ ಹೆಸರಿನಲ್ಲಿ ರೈತರ ಜಮೀನು ನುಂಗುತ್ತಿದೆ. ಅಲ್ಲದೇ ಕೆಆರ್‌ಎಸ್‌ ಅಣೆಕಟ್ಟು ನಿರ್ಮಿಸಿದ ವಿಶ್ವವಿಖ್ಯಾತ ಎಂಜಿನಿಯರ್‌ ಸರ್‌ ಎಂ.ವಿಶ್ವೇಶ್ವರಯ್ಯನವರು ಓದಿದ ಶಾಲೆಯ ಆವರಣವನ್ನು ಸಹ ವಕ್ಫ್‌ ಮಂಡಳಿ ಕಬಳಿಸಿದೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಮುಂದಿನ ದಿನಗಳಲ್ಲಿ ವಕ್ಫ್‌ ಮಂಡಳಿ ಹೆಸರಿನಲ್ಲಿ ವಿಧಾನಸೌಧ, ಲಾಲ್‌ಬಾಗ್‌ ಕೂಡ ನಮ್ಮದೆಂದು ಹೇಳಿದರೆ ಆಶ್ವರ್ಯವಿಲ್ಲ. ಈ ಹಿಂದೆ ಬೌರಿಂಗ್‌ ಆಸ್ಪತ್ರೆಯ 2 ಎಕರೆ ಜಮೀನನ್ನು ವಕ್ಫ್‌ ಮಂಡಳಿ ಕಬಳಿಕೆ ಮಾಡಿತ್ತು. ಆದರೆ ನಾನು ಸಚಿವನಾಗಿದ್ದ ವೇಳೆ ಅದರ ದಾಖಲೆಗಳನ್ನು ತರಿಸಿ ನೋಡಿದರೆ ಯಾವುದೋ ಹಳೆ ದಾಖಲೆಗಳನ್ನು ತಂದರು. ಬಳಿಕ ಆ ಜಾಗವನ್ನು ಹೋರಾಟ ಮಾಡಿ ಆಸ್ತಿ ಉಳಿಸಬೇಕಾಯಿತು. ವಕ್ಫ್‌ ಮಂಡಳಿ ತಿಮಿಂಗಿಲದಂತೆ ಬಡವರ ಜಮೀನು ನುಂಗಿ ರೈತರು ಕಂಗಾಲಾಗುವಂತೆ ಮಾಡುತ್ತಿದ್ದಾರೆ ಎಂದು ಅಕ್ರೋಶ ವ್ಯಕ್ತ ಪಡಿಸಿದ್ದಾರೆ.

ರಾಜ್ಯದಲ್ಲಿ ಮುಸ್ಲಿಮರಿಗೆ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡ ಮೇಲೆ ಎರಡು ಕೊಂಬು ಬಂದಿದೆ. ಸಿದ್ದರಾಮಯ್ಯರೆಂದರೆ ಅಹಿಂದ ನಾಯಕ ಅಲ್ಲ. ಅವರೊಬ್ಬರು ಮುಸ್ಲಿಮರ ಚಾಂಪಿಯನ್‌ ಆಗಲು ಮುಂದಾಗಿದ್ದಾರೆ. ಸರ್ಕಾರ ಲ್ಯಾಂಡ್‌ ಜಿಹಾದ್‌ ನಂತರ ರೇಷನ್‌ ಕಾರ್ಡ್‌ ಜಿಹಾದ್‌ಅನ್ನು ಪ್ರಾರಂಭಿಸಿದೆ ಎಂದು ವ್ಯಂಗ್ಯವಾಡಿದ್ದಾರೆ.

 

 

ಅರ್ಚನ ಎಸ್‌ ಎಸ್

Recent Posts

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…

23 mins ago

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

2 hours ago

ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ 2000 ಹೆಚ್ಚುವರಿ ಬಸ್‌ ವ್ಯವಸ್ಥೆ: ಕೆಎಸ್‌ಆರ್‌ಟಿಸಿ ಪ್ರಕಟಣೆ

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…

2 hours ago

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…

3 hours ago

ಯುದ್ಧದ ಸಮಯದಲ್ಲಿ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.…

3 hours ago

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ವಿದ್ಯಾರ್ಥಿ ಸಾವು

ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…

4 hours ago