ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದುಬಾರಿ ದುನಿಯಾ ಆರಂಭವಾಗಲಿದ್ದು, ಹಾಲು, ಮೊಸರು ಹಾಗೂ ಕಸಕ್ಕೂ ಸೆಸ್ ಕಟ್ಟಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ.
ನಾಳೆಯಿಂದ ಅನ್ವಯವಾಗುವಂತೆ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 4 ರೂ ಏರಿಕೆ ಮಾಡಲಾಗಿದ್ದು, ಖರೀದಿದಾರರು ಜೇಬು ಮುಟ್ಟಿ ನೋಡಿಕೊಳ್ಳುವ ಪರಿಸ್ಥಿತಿ ಎದುರಾಗಿದೆ.
ಹಾಲಿನ ದರ ಏರಿಕೆ ಬೆನ್ನಲ್ಲೇ ಹೋಟೆಲ್‌ನಲ್ಲಿ ಕಾಫಿ ಹಾಗೂ ಟೀ ಬೆಲೆ ಸದ್ಯದಲ್ಲೇ ಏರಿಕೆಯಾಗುವ ಎಲ್ಲಾ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಇನ್ನು ವಿದ್ಯುತ್ ದರ ಕೂಡ ಏರಿಕೆಯಾಗಿದ್ದು, ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳವಾಗಿದೆ.
ಮತ್ತೊಂದು ಶಾಕ್ ಎಂದರೆ ನೀರಿನ ದರವೂ ಏರಿಕೆಯಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿದ್ದು, ಸರ್ಕಾರದ ವಿರುದ್ಧ ಜನತೆ ಮುಗಿಬಿದ್ದಿದ್ದಾರೆ.
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಸರಿದೂಗಿಸಲೆಂದೇ ಬೆಲೆ ಏರಿಕೆಯಾಗುತ್ತಿದೆ ಎಂದು ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.