Mysore
19
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಹಣ ಕಳುವು ಪ್ರಕರಣ: ಹಣದ ಮೂಲದ ಬಗ್ಗೆ ಮಾಹಿತಿ ಕೇಳಿದ ಪೊಲೀಸರು

ಬೆಂಗಳೂರು: ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ 3 ಲಕ್ಷ ನಗದು ಹಣ ಕಳುವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಪೊಲೀಸರು 9 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆದರೆ ಹಣ ಕಳುವು ಮಾಡಿದವರು ಈವರೆಗೂ ಪತ್ತೆಯಾಗಿಲ್ಲ.

ಇದನ್ನು ಓದಿ : ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಹಣ ಕಳ್ಳತನ: ಎಫ್‌ಐಆರ್‌ ದಾಖಲು

ಈ ನಡುವೆ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು 3 ಲಕ್ಷದ ಹಣದ ಮೂಲದ ಬಗ್ಗೆ ಮಾಹಿತಿ ನೀಡುವಂತೆ ವಿಜಯಲಕ್ಷ್ಮೀ ದರ್ಶನ್‌ ಅವರಿಗೆ ಕೇಳಿದ್ದಾರೆ. ಹಣವನ್ನು ಯಾವ ಕಾರಣಕ್ಕಾಗಿ ಮನೆಯಲ್ಲಿ ಇಟ್ಟುಕೊಂಡಿದ್ದೀರಿ? ಆ ಹಣದ ಮೂಲವೇನು? ಎಂಬ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

ಇನ್ನು ಪ್ರಕರಣ ಸಂಬಂಧ ಈಗಾಗಲೇ ವಿಜಯಲಕ್ಷ್ಮೀ ಮ್ಯಾನೇಜರ್‌ ನಾಗರಾಜ್‌, ವಿಜಯಲಕ್ಷ್ಮೀ ಹಾಗೂ ಅವರ ತಾಯಿ, ಮಗ ವಿನೀಶ್‌, ಅವರ ಮೂವರು ಸ್ನೇಹಿತರನ್ನು ವಿಚಾರಣೆ ನಡೆಸಲಾಗಿದೆ.

Tags:
error: Content is protected !!