ಬೆಂಗಳೂರು : ಡೆಂಗ್ಯೂ ಪ್ರಕರಣಗಳು ಗಂಭೀರ ಹಂತಕ್ಕೆ ಹೋದಾಗ ಅದಕ್ಕೆ ಚಿಕಿತ್ಸೆ ಇಲ್ಲ. ಏನೇನೋ ಫ್ರೀ ಕೊಡುವ ಬದಲು ಸ್ಲಂ ವಠಾರಗಳಲ್ಲಿ ವಾಸ ಮಾಡುವವರಿಗೆ ಸೊಳ್ಳೆ ಪರದೆಗಳನ್ನ ಉಚಿತವಾಗಿ ಕೊಡಬೇಕು ಎಂದು ಸಂಸದ ಡಾ.ಮಂಜುನಾಥ್ ಹೇಳಿದರು.
ಬಿಜೆಪಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡೆಂಗ್ಯೂಗೆ ನಿಖರವಾದ ಚಿಕಿತ್ಸೆ ಅನ್ನೋದು ಇಲ್ಲ ಇದರ ಜೊತೆಗೆ ಇತರ ಕಾಯಿಲೆಗಳು ಬರುತ್ತವೆ. ಕೋವಿಡ್ ಅನ್ನು ಪ್ಯಾಂಡಮಿಕ್ ಕಾಯಿಲೆ ಎಂದೆವು. ಇದು ಎಂಡಮೆಕ್ ಕಾಯಿಲೆ. ಕೋವಿಡ್ ಮಾದರಿಯಲ್ಲಿ ಇದಕ್ಕೆ ಚಿಕಿತ್ಸೆ ನೀಡಬೇಕು. ಮೆಡಿಕಲ್ ಎಮರ್ಜೆನ್ಸಿ ಅಂತಾ ಘೋಷಣೆ ಮಾಡಬೇಕು ಎಂದರು.
ಈ ರೋಗಗಳ ಪತ್ತೆಗೆ ಹೆಚ್ಚು ದರ ತೆಗೆದುಕೊಳ್ಳುವ ಲ್ಯಾಬ್ ಗಳ ಬಾಗಿಲು ಮುಚ್ಚಬೇಕು. ಸೊಳ್ಳೆ ನಿಯಂತ್ರಣ ಮಾಡಬೇಕು. ಆರೋಗ್ಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ಕೆಲಸ ಮಾಡಬೇಕು.ಜೊತೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಡೆಂಗ್ಯೂ ಹರಡುವಿಕೆ ಪತ್ತೆ ಹಚ್ಚುವ ಕೆಲಸ ಆಗಬೇಕು ಎಂದು ತಿಳಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…