Mysore
18
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ರಾಜಕಾರಣದಲ್ಲಿ ಎರಡು ಅಭಿಪ್ರಾಯಗಳು ಇದ್ದೇ ಇರುತ್ತದೆ: ಗೃಹ ಸಚಿವ ಪರಮೇಶ್ವರ್‌

There are always two opinions in politics Home Minister Parameshwar

ತುಮಕೂರು: ಸ್ವಾಭಾವಿಕವಾಗಿ ರಾಜಕಾರಣದಲ್ಲಿ ಎರಡು ಅಭಿಪ್ರಾಯಗಳು ಇದ್ದೇ ಇರುತ್ತವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ಈ ಕುರಿತು ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯಾನಂದ ಕಾಶಪ್ಪನವರ್‌ ಅವರ ಕಾಂಗ್ರೆಸ್‌ ಶಾಸಕರ ಪಟ್ಟಿ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿ, ಆ ವಿಚಾರ ನನಗೆ ಗೊತ್ತಿಲ್ಲ. ಅವರನ್ನೇ ಕೇಳಬೇಕು ಎಂದರು.

ಕಾಂಗ್ರೆಸ್‌ನಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ ಎಂಬ ಬಿಜೆಪಿಯವರ ಆರೋಪಕ್ಕೆ ಅದೆಲ್ಲಾ ನನಗೆ ಗೊತ್ತಿಲ್ಲ ಎಂದು ಹೇಳಿದರು. ಬೆಂಗಳೂರಿನಲ್ಲಿ ಕಂಠೀರವ ಸ್ಟೇಡಿಯಂ ಬಿಟ್ಟರೆ ತುಮಕೂರಿನಲ್ಲಿ ಉತ್ತಮ ಕ್ರೀಡಾಂಗಣವಿದೆ. ಅದರ ನಿರ್ವಹಣೆಗೆ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜಕಾರಣದಲ್ಲಿ ಎರಡು ಅಭಿಪ್ರಾಯಗಳು ಇದ್ದೇ ಇರುತ್ತದೆ. ಹಾಗಾಗಿ ಕಾಂಗ್ರೆಸ್‌ ಮುಖಂಡ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಬಂದು ಶಾಸಕರನ್ನು ಮಾತನಾಡಿದ ಅವರ ಅಭಿಪ್ರಾಯ, ಕ್ಷೇತ್ರದ ಬಗ್ಗೆ ಹಾಗೂ ಆಡಳಿತದ ಕುರಿತು ಮಾತನಾಡಿಕೊಂಡು ಹೋಗುತ್ತಾರೆ. ಅವರ ಅನಿಸಿಕೆಗಳನ್ನು ತಿಳಿದುಕೊಂಡು ಆ ನಂತರ ಸಿಎಂ ಜೊತೆ ಚರ್ಚೆ ಮಾಡುತ್ತಾರೆ ಎಂದರು.

Tags:
error: Content is protected !!