There are always two opinions in politics Home Minister Parameshwar
ತುಮಕೂರು: ಸ್ವಾಭಾವಿಕವಾಗಿ ರಾಜಕಾರಣದಲ್ಲಿ ಎರಡು ಅಭಿಪ್ರಾಯಗಳು ಇದ್ದೇ ಇರುತ್ತವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯಾನಂದ ಕಾಶಪ್ಪನವರ್ ಅವರ ಕಾಂಗ್ರೆಸ್ ಶಾಸಕರ ಪಟ್ಟಿ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿ, ಆ ವಿಚಾರ ನನಗೆ ಗೊತ್ತಿಲ್ಲ. ಅವರನ್ನೇ ಕೇಳಬೇಕು ಎಂದರು.
ಕಾಂಗ್ರೆಸ್‌ನಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ ಎಂಬ ಬಿಜೆಪಿಯವರ ಆರೋಪಕ್ಕೆ ಅದೆಲ್ಲಾ ನನಗೆ ಗೊತ್ತಿಲ್ಲ ಎಂದು ಹೇಳಿದರು. ಬೆಂಗಳೂರಿನಲ್ಲಿ ಕಂಠೀರವ ಸ್ಟೇಡಿಯಂ ಬಿಟ್ಟರೆ ತುಮಕೂರಿನಲ್ಲಿ ಉತ್ತಮ ಕ್ರೀಡಾಂಗಣವಿದೆ. ಅದರ ನಿರ್ವಹಣೆಗೆ ವ್ಯವಸ್ಥೆ ಮಾಡಲಾಗುತ್ತದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜಕಾರಣದಲ್ಲಿ ಎರಡು ಅಭಿಪ್ರಾಯಗಳು ಇದ್ದೇ ಇರುತ್ತದೆ. ಹಾಗಾಗಿ ಕಾಂಗ್ರೆಸ್ ಮುಖಂಡ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಬಂದು ಶಾಸಕರನ್ನು ಮಾತನಾಡಿದ ಅವರ ಅಭಿಪ್ರಾಯ, ಕ್ಷೇತ್ರದ ಬಗ್ಗೆ ಹಾಗೂ ಆಡಳಿತದ ಕುರಿತು ಮಾತನಾಡಿಕೊಂಡು ಹೋಗುತ್ತಾರೆ. ಅವರ ಅನಿಸಿಕೆಗಳನ್ನು ತಿಳಿದುಕೊಂಡು ಆ ನಂತರ ಸಿಎಂ ಜೊತೆ ಚರ್ಚೆ ಮಾಡುತ್ತಾರೆ ಎಂದರು.
ಬೆಂಗಳೂರು: ಜನವರಿ.22ರಿಂದ ಜನವರಿ.31ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಬಗೆದಷ್ಟೂ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇದೀಗ ಚೌಕಿಮಠ ಕುಟುಂಬದ ವಾಸದ ಮನೆಯೊಳಗೆ ಅಪರೂಪದ…
ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ…
ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ…
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ…
ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಹಬಾಜ್ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ.…