ರಾಜ್ಯ

ಸದ್ಯಕ್ಕೆ ಬಸ್‌ ಪ್ರಯಾಣ ದರ ಏರಿಕೆ ಮಾಡುವ ಚಿಂತನೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ ಮಾಡಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಡೀಸೆಲ್ ಬೆಲೆ ಹೆಚ್ಚಳವಾಗಿಲ್ಲ. ಒಂದು ವೇಳೆ ಹೆಚ್ಚಳವಾದರೆ, ಏನು ಮಾಡಲು ಆಗಲ್ಲ. ಈಗಾಗಲೇ ಡೀಸೆಲ್ ಬೆಲೆ ಹೆಚ್ಚಿದೆ ಎಂದರು.

ಡೀಸೆಲ್ ಬೆಲೆ ಹೆಚ್ಚಳ ಮಾಡುತ್ತಿರುವ ಮಾಹಿತಿ ನನಗಿಲ್ಲ. ಮಾಡದಿದ್ದರೆ ಸಂತೋಷ ಎಂದ ಅವರು, ಸಾರಿಗೆ ಸಂಸ್ಥೆಗಳ ನೌಕರರ ವೇತನವನ್ನು ಪರಿಷ್ಕರಣೆ ಮಾಡಿದ್ದು, ಸರ್ಕಾರದ ತೀರ್ಮಾನವನ್ನು ಹೇಳಿದ್ದೇವೆ. ಆದರೆ ನೌಕರರು ಒಪ್ಪದಿರುವ ಬಗ್ಗೆ ಏನೂ ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ 26 ಸಾವಿರ ಬಸ್‌ಗಳು ಹಾಗೂ 1700 ಎಲೆಕ್ಟ್ರಿಕ್ ಬಸ್‌ಗಳಿವೆ ಎಂದು ಮಾಹಿತಿ ನೀಡಿದ ಅವರು, ಸದ್ಯಕ್ಕೆ ಬಸ್‌ ಪ್ರಯಾಣ ದರ ಏರಿಕೆ ಮಾಡುವ ಚಿಂತನೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.

 

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

7 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

7 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

8 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

10 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

10 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

14 hours ago