ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ. ಚಂದ್ರನಿಗೆ ಹಿಡಿದ ಗ್ರಹಣ ಬಿಡಬಹುದು. ಆದರೆ ರಾಜ್ಯಕ್ಕೆ 5 ತಿಂಗಳಿನಿಂದ ಹಿಡಿದಿರುವ ಗ್ರಹಣ ಸದ್ಯಕ್ಕೆ ಬಿಡುವ ಲಕ್ಷಣಗಳು ಕಾಣುತ್ತಿಲ್ಲ. ಕಾಂಗ್ರೆಸ್ ಸರ್ಕಾರವನ್ನು ಎಟಿಎಂ ಸರ್ಕಾರ ಎಂದು ರಾಜ್ಯ ಬಿಜೆಪಿ ಕಿಚಾಯಿಸಿದೆ.
ಸಾಮಾಜಿಕ ಜಾಲತಾಣ X ಖಾತೆಯಲ್ಲಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ನಿನ್ನೆ ತಡರಾತ್ರಿ ದೇಶಕ್ಕೆ ಏರ್ಪಟ್ಟ ಚಂದ್ರಗ್ರಹಣಕ್ಕೆ ರಾಜ್ಯ ಸರ್ಕಾರವನ್ನು ಹೋಲಿಕೆ ಮಾಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ ಕರ್ನಾಟಕಕ್ಕೆ ಗ್ರಹಣ ಹಿಡಿದಿದೆ ಎಂದು ವ್ಯಂಗ್ಯ ಚಿತ್ರದ ಜೊತೆಗೆ ರಾಜ್ಯದಲ್ಲಿ ಯಾವುದಕ್ಕೆಲ್ಲಾ ಗ್ರಹಣ ಹಿಡಿದಿದೆ ಅನ್ನೋದರ ಪಟ್ಟಿ ಮಾಡಿದ್ದು, ಸರ್ಕಾರಕ್ಕೆ ಹಿಡಿದ ಗ್ರಹಣ ಬಿಟ್ಟಿಲ್ಲ ಎಂದು ಕಿಡಿಕಾರಿದೆ.
ರಾಜ್ಯ ಬಿಜೆಪಿ ಬಿಡುಗಡೆ ಮಾಡಿರುವ ಗ್ರಹಣದ 8 ಪಟ್ಟಿ
1.ಕಾವೇರಿಗೆ ಗ್ರಹಣ
2.ವಿದ್ಯುತ್‌ಗೆ ಗ್ರಹಣ
3.ಅಭಿವೃದ್ಧಿಗೆ ಗ್ರಹಣ
4.ಅನ್ನಭಾಗ್ಯಕ್ಕೆ ಗ್ರಹಣ
5.ಕೈಗಾರಿಕೆಗಳಿಗೆ ಗ್ರಹಣ
6.ಕುಡಿಯುವ ನೀರಿಗೆ ಗ್ರಹಣ
7.ಕೃಷಿ ಉತ್ಪನ್ನಗಳಿಗೆ ಗ್ರಹಣ
8.ಬ್ರ್ಯಾಂಡ್ ಬೆಂಗಳೂರಿಗೆ ಗ್ರಹಣ
ಹೀಗೆ ರಾಜ್ಯದ 8 ಪ್ರಮುಖ ಸಮಸ್ಯೆಗಳನ್ನು ಪಟ್ಟಿ ಮಾಡಿರುವ ರಾಜ್ಯ ಬಿಜೆಪಿ, 30 ವರ್ಷಗಳ ಹಿಂದಿನ ಆ ದಿನಗಳ ಗ್ರಹಣ ಇದೀಗ ಸಿದ್ದರಾಮಯ್ಯರವರ ಸರ್ಕಾರದ ಕೃಪೆಯಿಂದ ಕರ್ನಾಟಕಕ್ಕೆ ಮತ್ತೊಮ್ಮೆ ವಕ್ಕರಿಸಿದೆ. ಕೈ ಕಚ್ಚಾಟ ಎಂದು ವ್ಯಂಗ್ಯವಾಡಿ ಟ್ವೀಟ್ ಮಾಡಿದೆ.
https://x.com/BJP4Karnataka/status/1718454968318132670?s=20
ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…
ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…
ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…
ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…
ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ…