ಬೆಳಗಾವಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಆಗ್ತಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ, ದೇಶದಲ್ಲಿ ಪ್ರಧಾನಿ ಬದಲಾಗುವ ಸಂಭವವಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿರುಗೇಟು ನೀಡಿದ್ದಾರೆ.
ಇಂದು (ಫೆ.17) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿ ಕೇಂದ್ರ ಸಚಿವರು ಅಸಮಾಧಾನಗೊಂಡಿದ್ದಾರೆ. ಕೆಲವು ಬಿಜೆಪಿ ನಾಯಕರು ಮೋದಿ ಸಾಧನೆ ಬಗ್ಗೆ ಮಾತ್ರ ಮಾತನಾಡುತ್ತಾರೆ. ಉಳಿದ ನಾಯಕರ ಸಾಧನೆ ಬಗ್ಗೆ ಮಾತನಾಡಲ್ಲ. ಹಾಗಾಗಿ ಪ್ರಧಾನಿ ಮೋದಿ ಬದಲಾಗಬಹುದು ಎಂಬ ವದಂತಿ ಹಬ್ಬಿದೆ ಎಂದು ಹೇಳಿದ್ದಾರೆ.
ಪ್ರಧಾನಿ ಹುದ್ದೆಯಿಂದ ಮೋದಿ ಅವರನ್ನು ಕೆಳಗಿಳಿಸಿ, ನಿತಿನ್ ಗಡ್ಕರಿ ಅವರನ್ನೇ ಪಿಎಂ ಮಾಡಿ ಎಂದಿದ್ದಾರೆ.