ಸೂರಜ್ ರೇವಣ್ಣ ಪ್ರಕರಣದಲ್ಲಿ ಭಾರೀ ಗೊಂದಲ ಕಾಣಿಸುತ್ತಿದೆ: ಆರ್ ಅಶೋಕ್

ಬೆಂಗಳೂರು: ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಪ್ರಕರಣದಲ್ಲಿ ಮೇಲ್ನೋಟಕ್ಕೆ ತೀವ್ರ ಗೊಂದಲ ಕಾಣಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಜೆಡಿಎಸ್ ಕಾರ್ಯಕರ್ತನಿಗೆ ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದು, ಈ ಬಗ್ಗೆ ಸಂತ್ರಸ್ತ ಯುವಕ ಬೆಂಗಳೂರಿನ ಡಿಜಿ ಕಚೇರಿಗೆ ದೂರು ನೀಡಿದ್ದಾನೆ.

ಸಂತ್ರಸ್ತ ನೀಡಿರುವ ದೂರು ಈಗ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದು, ಈ ಪ್ರಕರಣದ ಬಗ್ಗೆ ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದಾರೆ.

ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಈ ಪ್ರಕರಣದಲ್ಲಿ ಮೇಲ್ನೋಟಕ್ಕೆ ಗೊಂದಲ ಕಾಣಿಸುತ್ತಿದೆ. ಯಾರೂ ಕೂಡ ಕಾನೂನಿಗಿಂತ ದೊಡ್ಡವರಲ್ಲ. ಸೂಕ್ತ ತನಿಖೆ ಆಗಿ ಸತ್ಯಾಸತ್ಯತೆ ಹೊರಬರಲಿ. ತಪ್ಪು ಯಾರೇ ಮಾಡಿದ್ರೂ ಅದು ತಪ್ಪೇ. ಹೀಗಾಗಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತೆ ಎಂದರು.