ಬೆಂಗಳೂರು: ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಪ್ರಕರಣದಲ್ಲಿ ಮೇಲ್ನೋಟಕ್ಕೆ ತೀವ್ರ ಗೊಂದಲ ಕಾಣಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಜೆಡಿಎಸ್ ಕಾರ್ಯಕರ್ತನಿಗೆ ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದು, ಈ ಬಗ್ಗೆ ಸಂತ್ರಸ್ತ ಯುವಕ ಬೆಂಗಳೂರಿನ ಡಿಜಿ ಕಚೇರಿಗೆ ದೂರು ನೀಡಿದ್ದಾನೆ.
ಸಂತ್ರಸ್ತ ನೀಡಿರುವ ದೂರು ಈಗ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದು, ಈ ಪ್ರಕರಣದ ಬಗ್ಗೆ ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದಾರೆ.
ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಈ ಪ್ರಕರಣದಲ್ಲಿ ಮೇಲ್ನೋಟಕ್ಕೆ ಗೊಂದಲ ಕಾಣಿಸುತ್ತಿದೆ. ಯಾರೂ ಕೂಡ ಕಾನೂನಿಗಿಂತ ದೊಡ್ಡವರಲ್ಲ. ಸೂಕ್ತ ತನಿಖೆ ಆಗಿ ಸತ್ಯಾಸತ್ಯತೆ ಹೊರಬರಲಿ. ತಪ್ಪು ಯಾರೇ ಮಾಡಿದ್ರೂ ಅದು ತಪ್ಪೇ. ಹೀಗಾಗಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತೆ ಎಂದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…