Mysore
20
clear sky

Social Media

ಭಾನುವಾರ, 08 ಮಾರ್ಚ್ 2026
Light
Dark

ಚಿಕ್ಕಬಳ್ಳಾಪುರಕ್ಕೂ ಅಲಿ ಖಮೇನಿಗೂ ಇದೆ ನಂಟು

ಚಿಕ್ಕಬಳ್ಳಾಪುರ: ಇಸ್ರೇಲ್‌ ಹಾಗೂ ಅಮೇರಿಕಾ ನಡೆಸಿದ ದಾಳಿಯಲ್ಲಿ ಇರಾನ್‌ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಖನೇನಿಯ ಮಗಳು, ಅಳಿಯ, ಮೊಮ್ಮಕ್ಕಳು ಕೂಡ ದಾಳಿಯಲ್ಲಿ ಬಲಿಯಾಗಿದ್ದಾರೆ.

ಇರಾನ್‌ ನಾಯಕ ಅಲಿ ಖಮೇನಿ ಮೂಲತಃ ಉತ್ತರ ಪ್ರದೇಶದವರೆಂದು ತಿಳಿದುಬಂದಿದೆ. ಅಲಿ ಖಮೇನಿಗೂ ಕರ್ನಾಟಕದ ಚಿಕ್ಕಬಳ್ಳಾಪುರಕ್ಕೂ ಕೂಡ ನಂಟಿದೆ.

ಅಲಿ ಖಮೇನಿ ಹತ್ಯೆ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಹತ್ಯೆ ವಿಚಾರ ಹೊರಬಂದ ಬಳಿಕ ಗ್ರಾಮಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳು ಬಂದ್‌ ಮಾಡಿ ಶೋಕಾಚರಣೆ ನಡೆಸಿದ್ದಾರೆ. ಅಲಿಪುರ ಗ್ರಾಮವನ್ನು ಮಿನಿ ಇರಾನ್‌ ಎಂದೇ ಕರೆಯಲಾಗುತ್ತದೆ.

1986ರಲ್ಲಿ ಅಯತೊಲ್ಲಾ ಅಲಿ ಖಮೇನಿ ಅವರು ಅಲಿಪುರ ಗ್ರಾಮಕ್ಕೆ ಆಗಮಿಸಿದ್ದರು. ಈ ಬಗ್ಗೆ ಸ್ಥಳೀಯರಲ್ಲಿ ನೆನಪು ಇನ್ನೂ ಹಸಿರಾಗಿದೆ. ಗ್ರಾಮದಲ್ಲಿರುವ ಮಸೀದಿಯಲ್ಲಿ ಅವರು ಪ್ರಾರ್ಥನೆ ಸಲ್ಲಿಸಿದ್ದನ್ನು ಹಿರಿಯರು ಸ್ಮರಿಸುತ್ತಿದ್ದಾರೆ. ಅಲಿಪುರದ ಸುಮಾರು 20 ಸಾವಿರ ಜನರು ಖಮೇನಿ ಅವರನ್ನು ಧರ್ಮಗುರುವೆಂದು ಗೌರವಿಸುತ್ತಾರೆ.

 

Tags:
error: Content is protected !!