ಚಿಕ್ಕಬಳ್ಳಾಪುರ: ಇಸ್ರೇಲ್ ಹಾಗೂ ಅಮೇರಿಕಾ ನಡೆಸಿದ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಖನೇನಿಯ ಮಗಳು, ಅಳಿಯ, ಮೊಮ್ಮಕ್ಕಳು ಕೂಡ ದಾಳಿಯಲ್ಲಿ ಬಲಿಯಾಗಿದ್ದಾರೆ.
ಇರಾನ್ ನಾಯಕ ಅಲಿ ಖಮೇನಿ ಮೂಲತಃ ಉತ್ತರ ಪ್ರದೇಶದವರೆಂದು ತಿಳಿದುಬಂದಿದೆ. ಅಲಿ ಖಮೇನಿಗೂ ಕರ್ನಾಟಕದ ಚಿಕ್ಕಬಳ್ಳಾಪುರಕ್ಕೂ ಕೂಡ ನಂಟಿದೆ.
ಅಲಿ ಖಮೇನಿ ಹತ್ಯೆ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಹತ್ಯೆ ವಿಚಾರ ಹೊರಬಂದ ಬಳಿಕ ಗ್ರಾಮಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳು ಬಂದ್ ಮಾಡಿ ಶೋಕಾಚರಣೆ ನಡೆಸಿದ್ದಾರೆ. ಅಲಿಪುರ ಗ್ರಾಮವನ್ನು ಮಿನಿ ಇರಾನ್ ಎಂದೇ ಕರೆಯಲಾಗುತ್ತದೆ.
1986ರಲ್ಲಿ ಅಯತೊಲ್ಲಾ ಅಲಿ ಖಮೇನಿ ಅವರು ಅಲಿಪುರ ಗ್ರಾಮಕ್ಕೆ ಆಗಮಿಸಿದ್ದರು. ಈ ಬಗ್ಗೆ ಸ್ಥಳೀಯರಲ್ಲಿ ನೆನಪು ಇನ್ನೂ ಹಸಿರಾಗಿದೆ. ಗ್ರಾಮದಲ್ಲಿರುವ ಮಸೀದಿಯಲ್ಲಿ ಅವರು ಪ್ರಾರ್ಥನೆ ಸಲ್ಲಿಸಿದ್ದನ್ನು ಹಿರಿಯರು ಸ್ಮರಿಸುತ್ತಿದ್ದಾರೆ. ಅಲಿಪುರದ ಸುಮಾರು 20 ಸಾವಿರ ಜನರು ಖಮೇನಿ ಅವರನ್ನು ಧರ್ಮಗುರುವೆಂದು ಗೌರವಿಸುತ್ತಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…