ಬೆಂಗಳೂರು : ಸಹಕಾರ ಚಳವಳಿ ಇನ್ನಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವ ಅಗತ್ಯವಿದ್ದು, ಜವಾಹರಲಾಲ್ ನೆಹರೂ ಅವರ ಜಯಂತಿ ದಿನವೇ 72ನೇ ಸಹಕಾರಿ ಸಪ್ತಾಹದ ಉದ್ಘಾಟನೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಡೆದ 72ನೇ ಸಹಕಾರ ಸಪ್ತಾಹ ಆಚರಣೆಯ ಸಿದ್ಧತಾ ಸಭೆಯ ಅಧ್ಯಕ್ಷ ಕತೆ ವಹಿಸಿ, ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದರು.
ರಾಜ್ಯ ಮಟ್ಟದ 72 ನೇ ಸಪ್ತಾಹದ ಉದ್ಘಾಟನೆಯನ್ನು ನೆಹರೂ ಜಯಂತಿಯಂದೇ ದಿನಾಂಕ ನವೆಂಬರ್ 14ರಂದು ಮಾಡಲು ನಿರ್ಧರಿಸಿದ್ದೇವೆ.
ಅರಮನೆ ಮೈದಾನದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಸಪ್ತಾಹ ನಡೆಯಲಿದ್ದು ಇದರ ಉದ್ಘಾಟನೆಯನ್ನು ನಾನು ನೆರವೇರಿಸಲಿದ್ದೇನೆ. ಮಂಗಳೂರು, ರಾಯಚೂರು, ಹಾವೇರಿ, ಹೊಸಪೇಟೆ, ಕೊಪ್ಪಳದಲ್ಲಿ ಸಪ್ತಾಹ ನಡೆಯಲಿದ್ದು ಸಮಾರೋಪ ಸಮಾರಂಭ ನವೆಂಬರ್ 20 ರಂದು ಚಾಮರಾಜನಗರದಲ್ಲಿ ನಡೆಯಲಿದೆ. ನಾನು ಸಪ್ತಾಹದ ಉದ್ಘಾಟನೆಯನ್ನೂ ನೆರವೇರಿಸಿ, ಸಮಾರೋಪದಲ್ಲೂ ಭಾಗವಹಿಸುತ್ತೇನೆ ಎಂದರು.
ಇದನ್ನು ಓದಿ: ಟ್ರಾಕ್ಟರ್ ಡಿಕ್ಕಿ : ಐದು ವರ್ಷದ ಬಾಲಕಿ ಸಾವು, ಓರ್ವ ಬಾಲಕಿ ಗಂಭೀರ
“ಸಹಕಾರ ರತ್ನ” ಪ್ರಶಸ್ತಿ ಪ್ರದಾನ ಸಮಾರಂಭವೂ ಸಪ್ತಾಹದ ಉದ್ಘಾಟನೆಯ ದಿನವೇ ನಡೆಯಲಿದೆ. ರಾಜ್ಯದ ಎಲ್ಲಾ ಸಹಕಾರಿ ಧುರೀಣರು ನನಗೇ ಜವಾಬ್ದಾರಿ ಕೊಟ್ಟಿದ್ದು ನಾನೇ “ಸಹಕಾರ ರತ್ನ” ಪ್ರಶಸ್ತಿಗೆ ಹೆಸರು ಸೂಚಿಸಲು ಕೋರಿದ್ದಾರೆ. ಸಹಕಾರ ಮಹಾ ಮಂಡಳದ ಅಧ್ಯಕ್ಷರ ಜೊತೆ ಚರ್ಚಿಸಿ ಪ್ರಶಸ್ತಿಗೆ ಉತ್ತಮ ಸಹಕಾರಿಯನ್ನು ಆಯ್ಕೆ ಮಾಡಲಾಗುವುದು ಎಂದರು.
ಹಾಲಿನ ಡೈರಿಗಳನ್ನು ಹಾಲಿನ ಒಕ್ಕೂಟಗಳ ಅಧೀನದಲ್ಲಿ ಮೊದಲ ಬಾರಿಗೆ ತಂದಿದ್ದು ನಾನೇ. ಹೀಗೆ ತರುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಟ್ಟೆ ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.
ಸಹಕಾರ ರಾಜ್ಯದ ವ್ಯಾಪ್ತಿಗೆ ಬರುವ ವಿಚಾರ. ಕೇಂದ್ರದ ವ್ಯಾಪ್ತಿಗೆ ಬರುವ ವಿಚಾರ ಅಲ್ಲ ಎಂದು ಅಭಿಪ್ರಾಯಪಟ್ಟರು.
ಮಂಡ್ಯ: ಕಳೆದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ…
ಢಾಕಾ: ಬಾಂಗ್ಲಾದೇಶದ ಮೊದಲ ಮಹಿಳಾ ಸ್ಫೀಕರ್ ಆಗಿದ್ದ ಶಿರಿನ್ ಶರ್ಮಿನ್ ಚೌಧರಿ ಅವರನ್ನು ಢಾಕಾ ಮೆಟ್ರೋಪಾಲಿಟನ್ ಪೊಲೀಸರ ಪತ್ತೇದಾರಿ ವಿಭಾಗವು…
ಮೈಸೂರು: ಮೈಸೂರು ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್ ಅಷ್ಟೇ ಸಿಕ್ಕಿರೋದು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ…
ಮೈಸೂರು: ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ರೈತರ ವಿರೋಧದ ನಡುವೆಯೂ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ವರುಣ ಕ್ಷೇತ್ರದ…
ಪಶ್ಚಿಮ ಏಷ್ಯಾದಲ್ಲಿ ಅಮೆರಿಕ- ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿಗೆ ವಾಣಿಜ್ಯ ಸಿಲಿಂಡರ್ ಅಭಾವ…
ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ೩೭ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್‌ಪಿಜಿ ಗ್ಯಾಸ್…