ಕಲಬುರಗಿ : ರಾಜ್ಯದಲ್ಲಿನ ನಮ್ಮ ಸರ್ಕಾರ ತೆಗೆಯಲು ಯೋಜನೆ ನಡೆದಿದೆ. ಒಗ್ಗಾಟ್ಟಾಗಿ ಇರದೇ ಹೋದರೆ ಸರ್ಕಾರ ಉರುಳಬಹುದು ಎನ್ನುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವೇದಿಕೆಯಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ನೀಡಿದರು.
ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಜೋರಾಗಿರುವ ಸಮಯದಲ್ಲಿ ಖರ್ಗೆ ಅವರ ಈ ಎಚ್ಚರಿಕೆ ಚರ್ಚೆಗೆ ಗ್ರಾಸವಾಗಿದೆ.
ಕಲಬುರಗಿಯಲ್ಲಿ ನಡೆದ ವಿಭಾಗ ಮಟ್ಟದ ಉದ್ಯೋಗ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ತೆಗೆಯಲು ಯೋಜನೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ನಿಮ್ಮ ಸರ್ಕಾರವನ್ನು ಬೀಳಿಸುತ್ತಾರೆ ಎಂದು ಹೇಳಿದ್ದಾರೆ.
ನಿಮ್ಮಲ್ಲಿ ಏನೇ ಮನಸ್ತಾಪ ಇದ್ದರೂ ಒಗ್ಗಟ್ಟಾಗಿರಬೇಕು. ನೀವು ಹುಷಾರಾಗಿರಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಕಿವಿಮಾತು ಹೇಳಿದರು.



