ರಾಜ್ಯ

ನಮ್ಮ ಸರ್ಕಾರ ತೆಗೆಯಲು ಯೋಜನೆ ನಡೆದಿದೆ, ಒಗ್ಗಟ್ಟಾಗಿ ಇರಿ : ಖರ್ಗೆ ಎಚ್ಚರಿಕೆ

ಕಲಬುರಗಿ : ರಾಜ್ಯದಲ್ಲಿನ ನಮ್ಮ ಸರ್ಕಾರ ತೆಗೆಯಲು ಯೋಜನೆ ನಡೆದಿದೆ. ಒಗ್ಗಾಟ್ಟಾಗಿ ಇರದೇ ಹೋದರೆ ಸರ್ಕಾರ ಉರುಳಬಹುದು ಎನ್ನುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವೇದಿಕೆಯಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ನೀಡಿದರು.

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಜೋರಾಗಿರುವ ಸಮಯದಲ್ಲಿ ಖರ್ಗೆ ಅವರ ಈ ಎಚ್ಚರಿಕೆ ಚರ್ಚೆಗೆ ಗ್ರಾಸವಾಗಿದೆ.

ಕಲಬುರಗಿಯಲ್ಲಿ ನಡೆದ ವಿಭಾಗ ಮಟ್ಟದ ಉದ್ಯೋಗ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ತೆಗೆಯಲು ಯೋಜನೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ನಿಮ್ಮ ಸರ್ಕಾರವನ್ನು ಬೀಳಿಸುತ್ತಾರೆ ಎಂದು ಹೇಳಿದ್ದಾರೆ.

ನಿಮ್ಮಲ್ಲಿ ಏನೇ ಮನಸ್ತಾಪ ಇದ್ದರೂ ಒಗ್ಗಟ್ಟಾಗಿರಬೇಕು. ನೀವು ಹುಷಾರಾಗಿರಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಕಿವಿಮಾತು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಮೆರಿಕ-ಯುಕೆ ಸೇನಾನೆಲೆ ಮೇಲೆ ಇರಾನ್ ದಾಳಿ‌ ; ವರದಿ

ಟೆಹ್ರಾನ್  : ಇಷ್ಟು ದಿನ ತನ್ನ ನೆರೆಹೊರೆಯ ದೇಶಗಳಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ಮಾಡುತ್ತಿದ್ದ ಇರಾನ್ ಇದೀಗ…

21 mins ago

ಧುರಂಧರ್-‌2 ನಿರಾಶೆ ಮೂಡಿಸಿದೆ : ರಮ್ಯಾ ಪೋಸ್ಟ್‌

ಬೆಂಗಳೂರು : ಭರ್ಜರಿ ಪ್ರದರ್ಶನ ಕಾಣುತ್ತಿರು ಧುರಂಧರ್‌ 2 ಸಿನಿಮಾ ನಿರಾಸೆ ಮೂಡಿಸಿದ್ದು, ಚಿತ್ರಮಂದಿರಕ್ಕೆ ಹೋಗಿ ನಿಮ್ಮ ಸಮಯ ಮತ್ತು…

40 mins ago

ಸಾಲು ಸಾಲು ಸರಣಿ ರಜೆ : ಮೈಸೂರಿನ ಪ್ರವಾಸಿ ತಾಣಗಳಲ್ಲಿ ಜನಸ್ಥೋಮ

ಮೈಸೂರು : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ಸರಣಿ ರಜೆ ಹಿನ್ನೆಲೆ ಮೈಸೂರಿನ ಪ್ರಮುಖ ಪ್ರವಾಸಿ…

1 hour ago

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್‌ ಟಿಕೆಟ್‌ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

2 hours ago

ಜೂಜಾಡುವ ವೇಳೆ ಪೊಲೀಸರ ದಾಳಿ: ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…

2 hours ago

ಮೈಸೂರಿನಲ್ಲಿ ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಣೆ

ಮೈಸೂರು: ನಾಡಿನಾದ್ಯಂತ ರಂಜಾನ್‌ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…

3 hours ago