ರಾಜ್ಯ

ಸಿಎಟಿ ಆದೇಶ ; ಮೇಲ್ಮನವಿ ಸಲ್ಲಿಸಲು ಅವಕಾಶವಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಆಡಳಿತ ನ್ಯಾಯಮಂಡಳಿಯ ಐಪಿಎಸ್ ಅಧಿಕಾರಿಗಳ ಅಮಾನತ್ತು ಆದೇಶವನ್ನು ರದ್ದು ಮಾಡಿರುವ ಬಗ್ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿ ‘ವಾರ್ತಾ ಸೌಧ’ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಅವಕಾಶ ದೊರೆತಿದ್ದರಿಂದ ಮುಖ್ಯಮಂತ್ರಿಯಾದೆ: ಶಾಸಕ ಬಿ.ಆರ್.ಪಾಟೀಲ್ ಅವರು ಸಿದ್ದರಾಮಯ್ಯರವರು ಅದೃಷ್ಟದಿಂದ ಮುಖ್ಯಮಂತ್ರಿಯಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಅವರ ಹೇಳಿಕೆ ಬಗ್ಗೆ ಮಾಹಿತಿಯಿಲ್ಲ. ಬಿ.ಆರ್.ಪಾಟೀಲ್ ಹಾಗೂ ನಾನು ಒಟ್ಟಿಗೆ ಶಾಸಕರಾಗಿದ್ದರಿಂದ ಹಾಗೂ ನನಗೆ ಮುಖ್ಯಮಂತ್ರಿಯಾಗಲು ಅವಕಾಶ ದೊರೆತಿದ್ದರಿಂದ, ಬಿ.ಆರ್.ಪಾಟೀಲ್ ಅವರು ಈ ರೀತಿ ಹೇಳಿಕೆ ನೀಡಿರಬಹುದು ಎಂದರು.

ಜಾತಿಗಣತಿ ವಿವರವನ್ನು ಆನ್ ಲೈನ್ ನಲ್ಲಿಯೂ ಸಲ್ಲಿಸುವ ವ್ಯವಸ್ಥೆಯಿದೆ: ಜಾತಿಗಣತಿ ನಡೆಸಲಾಗಿದೆ ಎಂಬ ಪೋಸ್ಟರ್ ಗಳನ್ನು ಮನೆಗಳಿಗೆ ಭೇಟಿ ನೀಡದೇ, ಮನೆಯ ಮುಂದೆ ಅಂಟಿಸುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಜಾತಿಗಣತಿಯನ್ನು ನಡೆಸಲು ಹಲವು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಆನ್ ಲೈನ್ ಮೂಲಕವೂ ಜಾತಿವಿವರಗಳನ್ನು ನೀಡಬಹುದು ಅಥವಾ ಮನೆಗಳಿಗೆ ಭೇಟಿ ನೀಡಿ ವಿವರಗಳನ್ನು ಪಡೆಯಬಹುದು. ಈ ಬಗ್ಗೆ ಸತ್ಯಾಸತ್ಯತೆ ತಿಳಿದು ಮಾಧ್ಯಮದವರು ಪ್ರಶ್ನಿಸಬೇಕು ಎಂದರು.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

45 mins ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

54 mins ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

7 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

7 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

7 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

7 hours ago