Mysore
16
few clouds

Social Media

ಗುರುವಾರ, 25 ಡಿಸೆಂಬರ್ 2025
Light
Dark

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಈ ಬಗ್ಗೆ ಪರಿಷತ್ತಿನಲ್ಲಿ ಮಾತನಾಡಿದ ಅವರು, ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳ ವಿತರಣೆ ಕುರಿತು ಈಗಾಗಲೇ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಟೆಂಡರ್‌ ಪ್ರಕ್ರಿಯೆಯಿಂದಾಗಿ ಸರಬರಾಜು ಆಗದ ಔಷಧಗಳನ್ನು ಸ್ಥಳೀಯವಾಗಿಯೇ ಖರೀದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ದೇಶದಲ್ಲಿ ಕೆಲ ತಯಾರಿಕಾ ಕಂಪನಿಗಳು ಕಳಪೆ ಔಷಧ ಸರಬರಾಜು ಮಾಡುತ್ತಿರುವುದರಿಂದ ಸಮಸ್ಯೆ ಉಂಟಾಗಿದೆ.

ಇಂತಹ ಔಷಧ ಸೇವನೆಯಿಂದ ಜೀವ ಹಾನಿಯಾಗುತ್ತಿದ್ದು, ಇದನ್ನು ತಡೆಯಲು ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕಳೆದ ಜನವರಿಯಿಂದ ರಾಜ್ಯದಲ್ಲಿ ಉಂಟಾದ ಬಾಣಂತಿಯರ ಸಾವುಗಳಿಗೆ ನಿಖರ ಕಾರಣ ತಿಳಿಯಲು ಸ್ಯಾಂಪಲ್ಸ್‌ಗಳನ್ನು ವಿಶ್ಲೇಷಿಸಲಾಗುತ್ತಿದೆ. ದೇಶಕ್ಕೆ ಮಾದರಿ ಪ್ರತ್ಯೇಕ ನೀತಿಯನ್ನು ಜಾರಿ ಮಾಡಲು ಮುಂದಾಗಿದ್ದೇವೆ. ಕೇಂದ್ರ ಸರ್ಕಾರವು ಸಹ ಇದಕ್ಕೆ ಸಹಕಾರ ನೀಡಬೇಕಾಗಿದೆ ಎಂದರು.

 

Tags:
error: Content is protected !!