ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಬಗ್ಗೆ ಪರಿಷತ್ತಿನಲ್ಲಿ ಮಾತನಾಡಿದ ಅವರು, ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳ ವಿತರಣೆ ಕುರಿತು ಈಗಾಗಲೇ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಟೆಂಡರ್ ಪ್ರಕ್ರಿಯೆಯಿಂದಾಗಿ ಸರಬರಾಜು ಆಗದ ಔಷಧಗಳನ್ನು ಸ್ಥಳೀಯವಾಗಿಯೇ ಖರೀದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ದೇಶದಲ್ಲಿ ಕೆಲ ತಯಾರಿಕಾ ಕಂಪನಿಗಳು ಕಳಪೆ ಔಷಧ ಸರಬರಾಜು ಮಾಡುತ್ತಿರುವುದರಿಂದ ಸಮಸ್ಯೆ ಉಂಟಾಗಿದೆ.
ಇಂತಹ ಔಷಧ ಸೇವನೆಯಿಂದ ಜೀವ ಹಾನಿಯಾಗುತ್ತಿದ್ದು, ಇದನ್ನು ತಡೆಯಲು ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕಳೆದ ಜನವರಿಯಿಂದ ರಾಜ್ಯದಲ್ಲಿ ಉಂಟಾದ ಬಾಣಂತಿಯರ ಸಾವುಗಳಿಗೆ ನಿಖರ ಕಾರಣ ತಿಳಿಯಲು ಸ್ಯಾಂಪಲ್ಸ್‌ಗಳನ್ನು ವಿಶ್ಲೇಷಿಸಲಾಗುತ್ತಿದೆ. ದೇಶಕ್ಕೆ ಮಾದರಿ ಪ್ರತ್ಯೇಕ ನೀತಿಯನ್ನು ಜಾರಿ ಮಾಡಲು ಮುಂದಾಗಿದ್ದೇವೆ. ಕೇಂದ್ರ ಸರ್ಕಾರವು ಸಹ ಇದಕ್ಕೆ ಸಹಕಾರ ನೀಡಬೇಕಾಗಿದೆ ಎಂದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…