ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಕುರಿತು ಸಚಿವ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸದ್ಯ ರಾಜ್ಯದಲ್ಲಿ ಸಿಎಂ ಬದಲಾವಣೆಯ ಚರ್ಚೆಯೇ ಇಲ್ಲ. ನಮ್ಮ ವಿಚಾರಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು.
ಡಿಸಿಎಂ ಡಿ.ಕೆ.ಶಿವಕುಮಾರ್‌ಗೂ ಕೂಡ ಸಿಎಂ ಆಗುವ ಆಸೆ ಇದ್ದೇ ಇರುತ್ತದೆ. ಅವರು ಮೊದಲಿನಿಂದಲೂ ಕ್ಲೈಮ್ ಮಾಡಿದ್ದಾರೆ. ಸದ್ಯಕ್ಕೆ ಸಿಎಂ ಬದಲಾವಣೆ ಚರ್ಚೆ ಇಲ್ಲ. ಆ ವಿಚಾರ ಬಂದಾಗ ಅದರ ಬಗ್ಗೆ ಚರ್ಚೆ ಮಾಡೋಣ. ಪಕ್ಷದ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಸಿಎಂ ಸಿದ್ದರಾಮಯ್ಯರ ಜೊತೆ ನಾವೆಲ್ಲರೂ ಕೂಡ ಗುರುತಿಸಿಕೊಂಡಿದ್ದೇವೆ ಎಂದು ಹೇಳಿದರು.





